ಮಡಿಕೇರಿ, ಏ. ೨೯: ಕೊಡಗು ಹೆಗ್ಗಡೆ ಜನಾಂಗದ ಕ್ರೀಡೋತ್ಸವವು ಈ ಬಾರಿ ಮೂರ್ನಾಡಿನ ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಕ್ರೀಡಾ ಸಮಿತಿಯ ಅಧ್ಯಕ್ಷ ಪಡಿಞರಂಡ ಪ್ರಭು ಕುಮಾರ್ ನೇತೃತ್ವದಲ್ಲಿ ನಡೆಸಲು ಕೊಡಗು ಹೆಗಡೆ ಸಮಾಜ ಸಕಲ ಸಿದ್ಧತೆಯನ್ನು ಮಾಡಿಕೊಂಡಿದ್ದು, ಈಗಾಗಲೇ ಕ್ರಿಕೆಟ್ ೨೦ ತಂಡಗಳು ನೊಂದಾಯಿಸಿಕೊAಡಿವೆ. ಮಹಿಳಾ ಥ್ರೋಬಾಲ್‌ನಲ್ಲಿ ೫ ತಂಡಗಳು ನೋಂದಾಯಿಸಿಕೊAಡಿವೆ. ಮೇ ೧ರಂದು ಪೂರ್ವಾಹ್ನ ೧೧ ಗಂಟೆಗೆ ಕ್ರೀಡೋತ್ಸವದ ಉದ್ಘಾಟನಾ ಸಮಾರಂಭ ಸಮಾಜದ ಅಧ್ಯಕ್ಷ ಪಡಿಞರಂಡ ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಶಾಸಕ ಕೆ.ಜಿ. ಬೋಪಯ್ಯ, ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಚಂಗಚAಡ ರಶ್ಮಿ. ಕ್ರೀಡಾಕ್ಷೇತ್ರದಿಂದ ಪುಕ್ಕಳಿಚಂಡ ಸಾನಿಯಾ ದೇಚಮ್ಮನವರನ್ನು ಸನ್ಮಾನಿಸಲಾಗುತ್ತದೆ. ಸಭಾ ಕಾರ್ಯಕ್ರಮದ ನಂತರ ಕ್ರೀಡೋತ್ಸವಕ್ಕೆ ಶಾಸಕ ಕೆ.ಜಿ. ಬೋಪಯ್ಯ ಚಾಲನೆ ನೀಡಲಿದ್ದಾರೆ ತಾ. ೩ರಂದು ಅಪರಾಹ್ನ ೨.೩೦ಕ್ಕೆ ಸಮಾರೊಪ ಸಮಾರಂಭದಲ್ಲಿ ಅತಿಥಿಯಾಗಿ ವಿಧಾನಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ ಭಾಗವಹಿಸಲಿದ್ದಾರೆ ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ., ಪಿಯುಸಿ ಮತ್ತು ಡಿಗ್ರಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಮಾಡಲಾಗುವುದು. ಕ್ರೀಡೋತ್ಸವದ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯ ನಡೆಯಲಿದೆ.