*ಗೋಣಿಕೊಪ್ಪ, ಏ. ೨೯: ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ. ೫ ಲಕ್ಷ ಅನುದಾನದಲ್ಲಿ ನಿರ್ಮಾಣವಾದ ಕಾಯಪಂಡ ಕುಟುಂಬಸ್ಥರ ಐನ್‌ಮನೆಗೆ ಹೋಗುವ ಕಾಂಕ್ರಿಟ್ ರಸ್ತೆಯನ್ನು ರಾಜ್ಯ ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಕೆ.ಜಿ. ಬೋಪಯ್ಯ ಅವರು ಗ್ರಾಮಸ್ಥರ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಕಾಯಪಂಡ ಕುಟುಂಬಸ್ಥರ ಐನ್‌ಮನೆಯ ಮುಂಭಾಗದಲ್ಲಿ ಶಾಸಕರು, ರಾಜ್ಯ ಪಶ್ಚಿಮಘಟ್ಟ ಅರಣ್ಯ ಕಾರ್ಯಪಡೆ ಸಮಿತಿ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ, ತಾಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಕಾಡ್ಯಮಾಡ ಗಿರೀಶ್ ಗಣಪತಿ ಇವರುಗಳ ಹಾಜರಾತಿಯಲ್ಲಿ ಸಾರ್ವಜನಿಕರ ಮುಕ್ತ ಸಂಚಾರಕ್ಕೆ ಸಮರ್ಪಿಸಿದರು.

ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ೩೭ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ರೂ. ೧ ಕೋಟಿ ೧೮ ಲಕ್ಷ ಅನುದಾನದಲ್ಲಿ ರಸ್ತೆ ಅಭಿವೃದ್ಧಿ, ಮಳೆಹಾನಿ ದುರಸ್ತಿ, ಮೋರಿ ನಿರ್ಮಾಣ, ಕೊಠಡಿ ದುರಸ್ತಿ, ಅಂಗನವಾಡಿ ಕಟ್ಟಡ ದುರಸ್ತಿ, ವಿಶೇಷಚೇತನ ಸ್ನೇಹಿ ಶೌಚಾಲಯ, ಪ್ರಾಥಮಿಕ ಶಾಲೆ ಸಭಾಂಗಣ ದುರಸ್ತಿ ಕಾರ್ಯಗಳು ನಡೆಯಲಿವೆೆ ಎಂದು ಶಾಸಕರು ಮಾಹಿತಿ ನೀಡಿದರು.

ಅಕ್ರಮ ಸಕ್ರಮ ಸಮಿತಿ ತಾಲೂಕು ಸದಸ್ಯ ತೀತಮಾಡ ಲಾಲ ಭೀಮಯ್ಯ, ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಕುಂಞAಗಡ ಅರುಣ್ ಭೀಮಯ್ಯ, ಬಿರುನಾಣಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಂಗಮ್ಮ, ಉಪಾಧ್ಯಕ್ಷೆ ಅಮ್ಮತ್ತಿರ ರಾಜೇಶ್, ಸದಸ್ಯೆ ರೀನಾ, ಕುಪುö್ಪಡಿರ ಪೊನ್ನಪ್ಪ ಇದ್ದರು.