ಸೋಮವಾರಪೇಟೆ, ಏ. ೨೯: ಕಿರಗಂದೂರು ಗ್ರಾಮದ ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಮತ್ತು ಸಾಧಕರಿಗೆ ಸನ್ಮಾನ ಹಾಗೂ ಕ್ರೀಡಾಕೂಟ ಮೇ ೧ ರಂದು ಶಾಲಾ ಆವರಣದಲ್ಲಿ ನಡೆಯಲಿದೆ ಎಂದು ಹಳೆಯ ವಿದ್ಯಾರ್ಥಿ ಸಂಘದ ಗೌರವ ಆಧ್ಯಕ್ಷ ಜಿ.ಸಿ. ಬಿದ್ದಪ್ಪ ತಿಳಿಸಿದ್ದಾರೆ.
ಸಂಜೆ ೫ ಗಂಟೆಗೆ ನಡೆಯುವ ಸಮಾರೋಪ ಕಾರ್ಯಕ್ರಮವನ್ನು ಕಿರಗಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್.ಕೆ. ರಘು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಎಸ್.ಎ. ಕಾಳಪ್ಪ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ನಿವೃತ್ತ ಸಿಟಿಒ ಎಂ.ಎA. ನಾಣಿಯಪ್ಪ, ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ. ಚಂಗಪ್ಪ, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ, ಆರ್‌ಎಂಸಿ ಸದಸ್ಯೆ ಸುಮಿತ್ರಾ ಪೊನ್ನಪ್ಪ ಮತ್ತಿತರರು ಭಾಗವಹಿಸಲಿದ್ದಾರೆ. ಈ ಸಂದರ್ಭ ಶಾಲೆಯಲ್ಲಿ ಕೆಲಸ ಮಾಡಿದ ಶಿಕ್ಷಕರುಗಳನ್ನು, ಮಾಜಿ ಮತ್ತು ಹಾಲಿ ಸೈನಿಕರು, ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಗುವುದು. ಬೆಳಿಗ್ಗೆ ೯ಕ್ಕೆ ವಾಲಿಬಾಲ್, ಥ್ರೋಬಾಲ್, ಹಗ್ಗಜಗ್ಗಾಟ (ಪುರುಷರು ಮತ್ತು ಮಹಿಳೆಯರಿಗೆ), ಭಾರದ ಗುಂಡು ಎಸೆತ, ಗುಡ್ಡಗಾಡು ಓಟದ ಸ್ಪರ್ಧೆ ನಡೆಯಲಿದೆ ಎಂದು ತಿಳಿಸಿದ್ದಾರೆ.