ಕುಶಾಲನಗರ, ಏ. ೨೯: ಕುಶಾಲನಗರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ಯೂತ್ ಎಂಪವರ್ಮೆAಟ್ ಕಾರ್ಯಕ್ರಮದ ಅಡಿಯಲ್ಲಿ ಮಕ್ಕಳಿಗೆ ಡ್ರಾಯಿಂಗ್ ಸ್ಪರ್ಧೆ, ಸಂಚಾರಿ ನಿಯಮಗಳ ಬಗ್ಗೆ ಅರಿವು ಜಾಗೃತಿ ಮೂಡಿಸುವ ಕೆಲಸ ನಡೆಯಿತು.

ಕುಶಾಲನಗರದ ಎಪಿಸಿಎಂಎಸ್ ಸಭಾಂಗಣದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಟಿ.ಕೆ. ರಾಜಶೇಖರ್ ಅಧ್ಯಕ್ಷತೆ ಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಕಲಾ ಸ್ಪರ್ಧೆ ಏರ್ಪಡಿಸ ಲಾಗಿತ್ತು. ವಿಶ್ವ ಕಲಾ ದಿನ ಅಂಗವಾಗಿ ನಡೆದ ಸ್ಪರ್ಧೆಯಲ್ಲಿ ನೂರಕ್ಕೂ ಅಧಿಕ ಮಕ್ಕಳು ಭಾಗವಹಿಸಿದ್ದರು. ಸಂಚಾರಿ ಪೊಲೀಸ್ ಉಪ ನಿರೀಕ್ಷಕಿ ಗೀತಾ ಮತ್ತು ಸಿಬ್ಬಂದಿಗಳು ಸಂಚಾರಿ ನಿಯಮದ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಿದರು.

ಈ ಸಂದರ್ಭ ಮಾತನಾಡಿದ ಲಯನ್ಸ್ ಹಿರಿಯ ಸದಸ್ಯರಾದ ಪೊನ್ನಚನ ಮೋಹನ್, ಯುವಪೀಳಿಗೆ ದೇಶದ ಬೆನ್ನೆಲುಬುವಾಗಿದೆ. ಮಕ್ಕಳ ಪ್ರತಿಭೆಗಳ ಅನಾವರಣಕ್ಕೆ ವೇದಿಕೆ ಸೃಷ್ಟಿ ಮಾಡುವುದು ಸಂಘ-ಸAಸ್ಥೆಗಳ ಜವಾಬ್ದಾರಿಯಾಗಿದೆ. ಮಕ್ಕಳ ಗುರಿ ತಲುಪಿಸುವಲ್ಲಿ ಪೋಷಕರು ಮತ್ತು ಶಿಕ್ಷಕರು ಎಲ್ಲಾ ರೀತಿಯ ಪ್ರೋತ್ಸಾಹ ನೀಡಬೇಕಾಗಿದೆ ಎಂದರು. ಈ ಸಂದರ್ಭ ಲಯನ್ಸ್ ಕ್ಲಬ್ ಉಪಾಧ್ಯಕ್ಷ ಎಂ.ಎಸ್. ಚಿನ್ನಪ್ಪ ಕಾರ್ಯದರ್ಶಿ ಬಾಲಚಂದ್ರ, ಮಾಜಿ ಅಧ್ಯಕ್ಷ ಕೊಡಗನ ಹರ್ಷ, ಸತೀಶ್, ಸಾಯಿ ಸಂಜೀವಿನಿ ಸಂಸ್ಥೆಯ ರಮೇಶ್ ಮತ್ತಿತರರು ಇದ್ದರು.