ಸೋಮವಾರಪೇಟೆ, ಏ. ೩೦: ತಾಲೂಕು ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾ. ೩ ರಂದು ೮೮೯ನೇ ಶ್ರೀ ಬಸವ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ತಾಲೂಕು ತಹಶಿಲ್ದಾರ್ ಗೋವಿಂದರಾಜು ತಿಳಿಸಿದರು.

ತಾಲೂಕು ಆಡಳಿತ ಸೌಧದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ ೯.೩೦ಕ್ಕೆ ಕಕ್ಕೆಹೊಳೆ ಜಂಕ್ಷನ್‌ನಲ್ಲಿರುವ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ಮಾನವತಾವಾದಿ ಬಸವಣ್ಣ ಅವರ ಭಾವಚಿತ್ರ ಮೆರವಣಿಗೆ ನಡೆಯಲಿದೆ. ಜೇಸಿ ವೇದಿಕೆಯ ಮುಂಭಾಗದಲ್ಲಿರುವ ಶ್ರೀವಾಜಪೇಯಿ ಕನ್ನಡ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ ಎಂದರು.

ಸಭಾ ಕಾರ್ಯಕ್ರಮದಲ್ಲಿ ಶಾಸಕ ಅಪ್ಪಚ್ಚು ರಂಜನ್ ಸೇರಿದಂತೆ ಇತರ ಪ್ರಮುಖರು ಭಾಗವಹಿಸಲಿದ್ದು, ಸಮಾರಂಭದಲ್ಲಿ ಶ್ರಮಿಕರಿಬ್ಬರನ್ನು ಸನ್ಮಾನಿಸಲಾಗುವುದು. ಅಲ್ಲದೆ ಆಯ್ದ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು. ಸಮಿತಿಯ ಉಪಾಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ. ಚಂದ್ರು, ವೀರಶೈವ ಲಿಂಗಾಯಿತ ಸಂಘಟನಾ ವೇದಿಕೆಯ ರಾಷ್ಟಿçÃಯ ಸಂಘಟನಾ ಕಾರ್ಯದರ್ಶಿ ಎಸ್. ಮಹೇಶ್, ಸಮಿತಿಯ ಸದಸ್ಯರಾದ ಜೆ.ಸಿ. ಶೇಖರ್, ಕೆ.ಜಿ. ಸುರೇಶ್, ಪ.ಪಂ. ಸದಸ್ಯ ಬಿ.ಆರ್.ಮಹೇಶ್ ಹಾಗೂ ವಿವಿಧ ಇಲಾಖಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.