ಕುಶಾಲನಗರ, ಏ. ೨೯: ತಾಲೂಕಿನ ಶಿರಂಗಾಲ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ಭಾರೀ ಮಳೆಯೊಂದಿಗೆ ಸಿಡಿಲು ಬಡಿದ ಹಿನ್ನೆಲೆಯಲ್ಲಿ ದೇವಾಲಯದ ಮೇಲೆ ಮರ ಬಿದ್ದು ಹಾನಿಯಾಗಿದೆ. ಕಾಡು ಬಸವೇಶ್ವರ ದೇವಾಲಯದ ಮೇಲೆ ಮರದ ಕೊಂಬೆಗಳು ಬಿದ್ದು ದೇವಾಲಯದ ಚಾವಣಿ ಪೂರ್ಣ ಕುಸಿದುಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.