ಗೋಣಿಕೊಪ್ಪಲು, ಏ. ೩೦: ಜೋಡುಬೀಟಿ ಬಳಿ ನಡೆದ ರಸ್ತೆ ಅಪಘಾತಕ್ಕೆ ಸಂಬAಧಿಸಿದAತೆ ಬೈಕ್‌ನ ಹಿಂಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತವ್ಯಕ್ತಿ ಹುದಿಕೇರಿ ಸಮೀಪದ ಬೆಳ್ಳೂರು ಗ್ರಾಮದ ದೇವಯ್ಯನವರ ಪುತ್ರ ಸದಾಶಿವ (೩೮) ಎಂದು ತಿಳಿದು ಬಂದಿದೆ.

ಶುಕ್ರವಾರ ಸಂಜೆ ವೇಳೆ ಬೈಕ್‌ನಲ್ಲಿ ಸಂಚಾರ ಮಾಡುತಿದ್ದಾಗ ಜೋಡುಬೀಟಿ ಬಳಿ ಎದುರಿನಿಂದ ಬಂದ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್‌ನ ಹಿಂಬದಿಯಲ್ಲಿ ಕುಳಿತಿದ್ದ ಸದಾಶಿವಗೆ ಗಂಭೀರ ಸ್ವರೂಪದ ಗಾಯವಾಗಿತ್ತು.

ಸ್ಥಳೀಯ ನಾಗರಿಕರು ಅವರನ್ನು ಅಂಬ್ಯುಲೆನ್ಸ್ ಮೂಲಕ ಮೈಸೂರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ವೇಳೆ ಬೈಕ್ ಸವಾರ ಸತೀಶ್ ಹಾಗೂ ಇನ್ನೋರ್ವ ವ್ಯಕ್ತಿ ಯೋಗೇಶ್‌ಗೂ ಗಂಭೀರ ಸ್ವರೂಪದ ಗಾಯವಾದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸೇರಿಸಲಾಗಿದೆ.

ಸೂಕ್ತ ಚಿಕಿತ್ಸೆ ನಂತರ ಇವರಿಬ್ಬರೂ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.