ಸಿದ್ದಾಪುರ, ಏ. ೩೦: ಅಂಗಡಿ ಮತ್ತು ಹೊಟೇಲ್‌ಗಳಿಗೆ ಆರೋಗ್ಯ ಇಲಾಖಾಧಿಕಾರಿಗಳು ದಿಢೀರ್ ಭೇಟಿ ನೀಡಿ ತಂಬಾಕು ಕಾಯಿದೆ ಉಲ್ಲಂಘನೆ ಬಗ್ಗೆ ಅರಿವು ಮೂಡಿಸಿ ದಂಡ ವಿಧಿಸಿದರು.
ಹೊಟೇಲ್ ಮತ್ತು ಬೇಕರಿಗಳಿಗೆ ಭೇಟಿ ನೀಡಿ ಆಹಾರ ಸುರಕ್ಷತಾ ಕಾಯ್ದೆ ಬಗ್ಗೆ ಹಾಗೂ ಸ್ವಚ್ಛತೆಯ ಬಗ್ಗೆ ಮಾರ್ಗದರ್ಶನ ನೀಡಲಾಯಿತು. ಈ ಸಂದರ್ಭ ತಾಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ಶಶಿಕಾಂತ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶಿವಯ್ಯ, ಬಾಳೆಲೆ ಆರೋಗ್ಯ ಶಿಕ್ಷಣಾಧಿಕಾರಿ ತೇಜಸ್ ಸೇರಿದಂತೆ ಪೊಲೀಸ್ ಇಲಾಖೆಯವರು ಇದ್ದರು.