೧೨೨ ವರ್ಷಗಳಲ್ಲಿಯೇ ಅತ್ಯಂತ ಹೆಚ್ಚಿನ

ಬಿಸಿಲು: ಹವಾಮಾನ ಇಲಾಖೆ

ನವದೆಹಲಿ, ಏ. ೩೦: ವಾಯುವ್ಯ ಮತ್ತು ಮಧ್ಯ ಭಾರತದಲ್ಲಿ ಏಪ್ರಿಲ್ ತಿಂಗಳಲ್ಲಿ ಸರಾಸರಿ ಗರಿಷ್ಠ ಉಷ್ಣಾಂಶ ೩೫.೯ ಮತ್ತು ೩೭.೭೮ ಡಿಗ್ರಿ ಸೆಲ್ಸಿಯಸ್‌ನಷ್ಟು ತಲುಪುವುದರೊಂದಿಗೆ ೧೨೨ ವರ್ಷಗಳಲ್ಲಿ ಅತ್ಯಂತ ಹೆಚ್ಚಿನ ಬಿಸಿಲಿನ ಅನುಭವವಾಗಿದೆ ಎಂದು ಹವಾಮಾನ ಇಲಾಖೆ ಶನಿವಾರ ತಿಳಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾರತೀಯ ಹವಾಮಾನ ಇಲಾಖೆ ಮಹಾನಿರ್ದೇಶಕ ಮೃತ್ಯುಂಜಯ ಮೊಹಾಪಾತ್ರ, ವಾಯುವ್ಯ ಮತ್ತು ಮಧ್ಯ ಭಾರತದ ಪ್ರದೇಶಗಳಾದ ಗುಜರಾತ್, ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಉಷ್ಣಾಂಶ ಮುಂದುವರೆಯಲಿದೆ ಎಂದು ತಿಳಿಸಿದರು. ಮೇ ತಿಂಗಳಲ್ಲಿ ದಕ್ಷಿಣದ ಪರ್ಯಾಯ ಪ್ರಸ್ಥಭೂಮಿಯಂತಹ ಕೆಲವೊಂದು ವಲಯಗಳನ್ನು ಹೊರತುಪಡಿಸಿದರೆ ದೇಶದ ಬಹುತೇಕ ಕಡೆಗಳಲ್ಲಿ ರಾತ್ರಿ ವೇಳೆಯೂ ಬಿಸಿಯ ವಾತಾವರಣ ಇರಲಿದೆ ಎಂದು ಮೊಹಪಾತ್ರ ಹೇಳಿದರು. ಏಪ್ರಿಲ್ ತಿಂಗಳಲ್ಲಿ ದೇಶಾದ್ಯಂತ ಸರಾಸರಿ ೩೫.೦೫ ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ೧೨೨ ವರ್ಷಗಳಲ್ಲಿ ನಾಲ್ಕನೇ ಬಾರಿಗೆ ಈ ರೀತಿಯ ಹೆಚ್ಚಿನ ಉಷ್ಣಾಂಶ ದಾಖಲಾಗಿದೆ ಎಂದು ಅವರು ತಿಳಿಸಿದರು. ಮೇ ತಿಂಗಳಲ್ಲಿ ರಾಷ್ಟ್ರದಲ್ಲಿ ಸರಾಸರಿ ಮಳೆ ಸಾಮಾನ್ಯಕ್ಕಿಂತ ಹೆಚ್ಚಿರುವ ಸಾಧ್ಯತೆಯಿದೆ. ಆದಾಗ್ಯೂ, ವಾಯುವ್ಯ ಮತ್ತು ಈಶಾನ್ಯ ಭಾರತದ ಪ್ರದೇಶಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ ಎಂದು ಅವರು ಮಾಹಿತಿ ನೀಡಿದರು.

ಹಿಂದೂ ಕಾರ್ಯಕರ್ತರಿಂದ ಸಾಮೂಹಿಕ ಆತ್ಮಹತ್ಯೆ ಬೆದರಿಕೆ

ಲಖನೌ, ಏ.೩೦: ಆಗ್ರಾದಲ್ಲಿನ ರಾಜಾ ಕಿ ಮಂಡಿ ರೈಲ್ವೆ ನಿಲ್ದಾಣದ ಆವರಣದಲ್ಲಿರುವ ೨೫೦ ವರ್ಷ ಹಳೆಯದಾದ ಚಾಮುಂಡ ದೇವಿ ದೇವಾಲಯ ಸ್ಥಳಾಂತರಕ್ಕೆ ರೈಲ್ವೆ ನೋಟೀಸ್ ಹೊರಡಿಸಿದ ಬಳಿಕ ಹಿಂದೂ ಸಂಘಟನೆ ಕಾರ್ಯಕರ್ತರು ಜೀವ ಬೆದರಿಕೆ ಹಾಕಿದ್ದಾರೆ. ಒಂದು ವೇಳೆ ರೈಲ್ವೆ ಪ್ರಾಧಿಕಾರ ಇದನ್ನು ಮುಂದುವರೆಸಿದ್ದಲ್ಲಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹಿಂದೂ ಕಾರ್ಯಕರ್ತರು ಬೆದರಿಕೆ ಹಾಕಿದ್ದಾರೆ. ರೈಲ್ವೆ ನಿಲ್ದಾಣದಿಂದ ದೇವಾಲಯ ಸ್ಥಳಾಂತರಕ್ಕೆ ರೈಲ್ವೆ ವಿಭಾಗೀಯ ಮ್ಯಾನೇಜರ್ ಆನಂದ್ ಸ್ವರೂಪ್ ಏಪ್ರಿಲ್ ೨೦ ರಂದು ದೇವಾಲಯ ಆಡಳಿತ ಮಂಡಳಿಗೆ ನೋಟೀಸ್ ಕಳುಹಿಸಿದ್ದರು. ಪ್ರಯಾಣಿಕರಿಗೆ ತೊಂದರೆಯಾಗುತ್ತಿರುವುದರಿAದ ದೇವಾಲಯವನ್ನು ಸ್ಥಳಾಂತರಿಸಲಾಗುತ್ತಿದೆ. ಒಂದು ವೇಳೆ ದೇವಾಲಯ ಸ್ಥಳಾಂತರಿಸದಿದ್ದಲ್ಲಿ, ರೈಲ್ವೆ ಫ್ಲಾಟ್ ಫಾರಂನ್ನು ಸ್ಥಳಾಂತರಿಸಬೇಕಾಗುತ್ತದೆ ಎಂದು ನೋಟೀಸ್‌ನಲ್ಲಿ ಉಲ್ಲೇಖಿಸಲಾಗಿತ್ತು. ಸಮೀಪದಲ್ಲಿದ್ದ ಮಸೀದಿ, ದರ್ಗಾಗಳಿಗೂ ಇದೇ ರೀತಿಯ ನೋಟೀಸ್ ಕಳುಹಿಸಲಾಗಿತ್ತು. ಈ ನೋಟೀಸ್‌ಗೆ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿ, ಆಗ್ರಾದಲ್ಲಿನ ರೈಲ್ವೆ ವಿಭಾಗೀಯ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಪತ್ನಿ ಮೇಲೆ ಪತಿ ಹಾಗೂ ಸಂಬAಧಿಕರಿAದ ಸಾಮೂಹಿಕ ಅತ್ಯಾಚಾರ

ಭರತ್‌ಪುರ, ಏ. ೩೦: ವರದಕ್ಷಿಣೆ ಕೊಡಲಿಲ್ಲ ಎಂಬ ಕಾರಣಕ್ಕೆ ಪತಿ ಮತ್ತು ಆತನ ಸಂಬAಧಿಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಅದನ್ನು ವೀಡಿಯೊ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಘಟನೆ ರಾಜಸ್ಥಾನದ ಭರತ್‌ಪುರದಲ್ಲಿ ನಡೆದಿದೆ. ಸಂತ್ರಸ್ತೆಯು ರೂ. ೧.೫ ಲಕ್ಷ ವರದಕ್ಷಿಣೆ ಕೊಡಲಿಲ್ಲ ಎಂಬ ಕಾರಣಕ್ಕೆ ಪತಿ ಮತ್ತು ಆತನ ಸಂಬAಧಿಕರಿಬ್ಬರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ. ಇದೀಗ ಆ ಮಹಿಳೆ ತನ್ನ ಪತಿ ಮತ್ತು ಇಬ್ಬರು ಸಂಬAಧಿಕರ ಮೇಲೆ ಅತ್ಯಾಚಾರದ ಪ್ರಕರಣ ದಾಖಲಿಸಿದ್ದು, ಯೂಟ್ಯೂಬ್‌ಗೆ ಅಶ್ಲೀಲ ವಿಡಿಯೋ ಅಪ್‌ಲೋಡ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಭರತ್‌ಪುರದ ಕಮಾನ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ದೌಲತ್ ಸಾಹು ಅವರು ಪ್ರಕರಣ ತನಿಖೆ ಕೈಗೊಂಡಿದ್ದಾರೆ.