ಮಡಿಕೇರಿ, ಏ. ೩೦: ಕೊಡಗು ರಕ್ಷಣಾ ವೇದಿಕೆಯ ಜಿಲ್ಲಾ ಕಾರ್ಯದರ್ಶಿಯಾಗಿ ಸಂಪಾಜೆ ಹೋಬಳಿ ಚೆಂಬು ಗ್ರಾಮದ ಉದ್ಯಮಿ ಜಯಂತ್ ಪೊಯ್ಯೆಮಜಲು ಅವರನ್ನು ನೇಮಕಗೊಳಿಸಲಾಗಿದೆ ಎಂದು ಕೊ.ರ.ವೇ. ಅಧ್ಯಕ್ಷ ಪವನ್ ಪೆಮ್ಮಯ್ಯ ತಿಳಿಸಿದ್ದಾರೆ.

ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಆಡಳಿತ ವ್ಯವಸ್ಥೆಯ ಗಮನ ಸೆಳೆಯುವ ಸಾಮಾಜಿಕ ಕಳಕಳಿಯೊಂದಿಗೆ ಕೊ.ರ.ವೇ. ಕಾರ್ಯನಿರ್ವಹಿಸುತ್ತಿದ್ದು, ಸಂಘಟನೆಯನ್ನು ಬಲಗೊಳಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.