ಮಡಿಕೇರಿ, ಏ. ೩೦: ಬಿಲ್ಲವ ಸಮಾಜ ಸೇವಾ ಸಂಘ ಮಡಿಕೇರಿ ವತಿಯಿಂದ ೧೬ನೇ ವರ್ಷದ ಜಿಲ್ಲಾಮಟ್ಟದ ಕೋಟಿ ಚೆನ್ನಯ್ಯ ಕ್ರೀಡಾಕೂಟಕ್ಕೆ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಇಂದು ಚಾಲನೆ ದೊರೆಯಿತು.

ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಮಡಿಕೇರಿ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಾಧ್ಯಕ್ಷ ಅರುಣ್‌ಕುಮಾರ್ ವಹಿಸಿದ್ದರು. ಅತಿಥಿಗಳಾಗಿ ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾದ ಕಾರ್ಯಾಧ್ಯಕ್ಷ ಬಿ.ಎಂ. ರಾಜಶೇಖರ್, ಮಡಿಕೇರಿ ಬಿಲ್ಲವ ಸಮಾಜ ಸೇವಾ ಸಂಘದ ಸ್ಥಾಪಕ ಸದಸ್ಯ ಬಿ.ಡಿ. ಕೃಷ್ಣಪ್ಪ ಸಾಲಿಯಾನ್, ಬಿಲ್ಲವ ಸಮಾಜ ಸೇವಾ ಸಂಘದ ಮಡಿಕೇರಿ ತಾಲೂಕು ಅಧ್ಯಕ್ಷೆ

ಬಿ.ಎಸ್. ಲೀಲಾವತಿ ಮತ್ತಿತರರು ಪಾಲ್ಗೊಂಡಿದ್ದರು. ಕ್ರೀಡಾಕೂಟ ಸಮಾರೋಪ ಸಮಾರಂಭ ತಾ. ೧ರಂದು (ಇಂದು) ಮಧ್ಯಾಹ್ನ ೩ ಗಂಟೆಗೆ ನಡೆಯಲಿದೆ.