ಮಡಿಕೇರಿ, ಏ. ೩೦: ತಾ. ೬ ರಂದು
ಶ್ರೀ ಶಂಕರಾಚಾರ್ಯ ಜಯಂತಿಯನ್ನು ನಗರದ
ಶ್ರೀ ಲಕ್ಷಿö್ಮÃನರಸಿಂಹ ಕಲ್ಯಾಣ ಮಂಟಪದ ಶತಮಾನ ಭವನದಲ್ಲಿ ವಿಜೃಂಭಣೆಯಿAದ ಆಚರಿಸಲು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಸರ್ಕಾರ ಈ ಬಾರಿ ಶ್ರೀ ಶಂಕರಾಚಾರ್ಯ ರಾಜ್ಯ ಮಟ್ಟದ ಜಯಂತಿ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಆಯೋಜಿಸಲು ಸೂಚಿಸಿದೆ. ಆ ನಿಟ್ಟಿನಲ್ಲಿ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮವನ್ನು ವಿಶಿಷ್ಟ ಹಾಗೂ ವ್ಯವಸ್ಥಿತವಾಗಿ ನಡೆಸಲು ಸಂಘಟಣೆಗಳು ಸಹಕರಿಸುವಂತೆ ಕೋರಿದರು. ಸ್ಥಳೀಯ ಕಲಾತಂಡಗಳಿಗೆ ಅವಕಾಶ ನೀಡುವಂತೆ ಸಲಹೆ ನೀಡಿದರು.
ಭಜನಾ ಸ್ಪರ್ಧೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಜಿಲ್ಲಾ ಉಸ್ತುವಾರಿ ಸಚಿವರು
ಸೇರಿದಂತೆ ಜನಪ್ರತಿನಿಧಿಗಳನ್ನು ಆಹ್ವಾನಿಸುವುದು, ವೇದಿಕೆ ಕಾರ್ಯಕ್ರಮ ಸಿದ್ಧತೆ ಮಾಡಿಕೊಳ್ಳುವುದು, ಮತ್ತಿತರ ಕಾರ್ಯಕ್ರಮವನ್ನು ಬಜೆಟ್ಗೆ ಅನುಗುಣವಾಗಿ ಅರ್ಥಪೂರ್ಣವಾಗಿ ಆಯೋಜಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಸೂಚಿಸಿದರು.
(ಮೊದಲ ಪುಟದಿಂದ) ಬ್ರಾಹ್ಮಣ ಸಮಾಜದ ಪ್ರಮುಖರಾದ ಸಂಪತ್ ಕುಮಾರ್ ಮಾತನಾಡಿ, ತಾ ೬ ರಂದು ಬೆಳಗ್ಗೆ ೧೦ ಗಂಟೆಗೆ ನಗರದ ಗಾಂಧಿ ಮೈದಾನದಿಂದ ಮೆರವಣಿಗೆ ಹೊರಟು ಜನರಲ್ ತಿಮ್ಮಯ್ಯ ವೃತ್ತದ ಮಾರ್ಗ, ಅಜ್ಜಮಾಡ ದೇವಯ್ಯ ವೃತ್ತದ ಮೂಲಕ ಸಾಗಿ ಶ್ರೀ ಲಕ್ಷಿö್ಮÃನರಸಿಂಹ ಕಲ್ಯಾಣ ಮಂಟಪದ ಶತಮಾನ ಭವನಕ್ಕೆ ತೆರಳಲಾಗುತ್ತದೆ. ಶಂಕರಾಚಾರ್ಯ ಸ್ತಬ್ಧಚಿತ್ರ ಒಳಗೊಂಡ ಮೆರವಣಿಗೆ ಸಾಗಲಿದ್ದು, ಡೊಳ್ಳು ಕುಣಿತ, ಚೆಂಡೆ, ನಾದಸ್ವರ ಸೇರಿದಂತೆ ವಿವಿಧ ಕಲಾತಂಡಗಳ ಜೊತೆ ಮೆರವಣಿಗೆ ಇರಲಿದೆ. ಭಜನಾ ಸ್ಪರ್ಧೆಗಳು ನಡೆಯಲಿದೆ ಎಂದು ಹೇಳಿದರು.
ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಮೇಶ್ ಹೊಳ್ಳ ಮಾತನಾಡಿ, ಶಂಕರಾಚಾರ್ಯ ರಾಜ್ಯ ಮಟ್ಟದ ಜಯಂತಿಯನ್ನು ಸರ್ಕಾರ ಇದೇ ಮೊದಲ ಬಾರಿ ಆಚರಿಸಲು ಅವಕಾಶ ನೀಡಿದೆ. ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಹೇಳಿದರು.
ಬ್ರಾಹ್ಮಣ ಸಮಾಜದ ಮತ್ತೋರ್ವ ಮುಖಂಡ ಡಾ. ರಾಜಾರಾಂ ಮಾತನಾಡಿ, ಶ್ರೀ ಶಂಕರಾಚಾರ್ಯ ಜಯಂತಿಯನ್ನು ವಿಶಿಷ್ಟವಾಗಿ ಆಚರಿಸಲು ಉದ್ದೇಶಿಸಲಾಗಿದೆ. ಆ ನಿಟ್ಟಿನಲ್ಲಿ ಶಂಕರಾಚಾರ್ಯರ ತತ್ವಗಳನ್ನು ಸಮಾಜಕ್ಕೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಬೇಕಿದೆ ಎಂದು ಹೇಳಿದರು.
ರಾಜ್ಯಮಟ್ಟದ ಕಾರ್ಯಕ್ರಮ ಆಗಿರುವುದರಿಂದ ಬೆಳಗ್ಗೆಯಿಂದ ಸಂಜೆಯವರೆಗೆ ದಿನವಿಡೀ ಕಾರ್ಯಕ್ರಮ ಆಯೋಜಿಸುವುದು ಅತ್ಯಗತ್ಯ. ಆ ನಿಟ್ಟಿನಲ್ಲಿ ಸಂಜೆ ವೇಳೆಯೂ ಸಹ ಶಂಕರಾಚಾರ್ಯ ಸ್ತಬ್ಧಚಿತ್ರ ಮೆರವಣಿಗೆ ಮಾಡಲು ಉದ್ದೇಶಿಸಲಾಗಿದೆ ಎಂದರು.
ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ ಮಾತನಾಡಿ, ಶಂಕರಾಚಾರ್ಯ ಜಯಂತಿ ಹಿನ್ನೆಲೆ ಉತ್ತಮ ಕಲಾತಂಡಗಳನ್ನು ಆಹ್ವಾನಿಸಬೇಕು. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಬೇಕು ಎಂದು ಸಲಹೆ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ಸ್ವಾಮಿ ಮಾತನಾಡಿ, ಶ್ರೀ ಶಂಕರಾಚಾರ್ಯ ಜಯಂತಿಯನ್ನು ಅರ್ಥಪೂರ್ಣವಾಗಿ ಆಯೋಜಿಸಲು ಎಲ್ಲರೂ ಸಹಕರಿಸಬೇಕಿದೆ ಎಂದರು.
ಮೆರವಣಿಗೆ, ವೇದಿಕೆ ಅಲಂಕಾರ, ಮಧ್ಯಾಹ್ನದ ಭೋಜನ ಹೀಗೆ ವಿವಿಧ ಕಾರ್ಯಕ್ರಮಗಳ ವ್ಯವಸ್ಥಿತ ಆಯೋಜನೆ ಸಂಬAಧಿಸಿದAತೆ ಉಪಸಮಿತಿಯನ್ನು ರಚಿಸಿ ಕಾರ್ಯಕ್ರಮ ಆಯೋಜಿಸಲು ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಬಿ.ಸಿ. ಸತೀಶ ನಿರ್ದೇಶನ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ .ನಂಜುAಡೇಗೌಡ, ಪುರುಷೋತ್ತಮ ಭಟ್, ಪ್ರಶಾಂತ್, ಮುನೀರ್ ಅಹಮದ್, ಸುಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಟಿ. ದರ್ಶನಾ, ಮಣಜೂರು ಮಂಜುನಾಥ್ ಇತರರು ಇದ್ದರು.