ಕಡಂಗ, ಏ. ೩೦: ಕಡಂಗ ಪ್ರಾಥಮಿಕ ಆರೋಗ್ಯ ಮತ್ತು ಕ್ಷಮ ಕೇಂದ್ರ ತಿತಿಮತಿಯಲ್ಲಿ ವ್ಯೆದ್ಯಾಧಿಕಾರಿ ಗಳಾದ ಡಾ. ವಿನೋದಕುಮಾರ್ ಅವರ ಅಧ್ಯಕ್ಷತೆಯಲ್ಲಿ ವಿಶ್ವ ಮಲೇರಿಯಾ ದಿನಾಚರಣೆ ಆಚರಿಸಲಾಯಿತು. ಮಲೇರಿಯಾ ಜ್ವರ ಹರಡುವ ಬಗ್ಗೆ ಅರಿವು ಮೂಡಿಸಲಾಯಿತು. ಕಾರ್ಯ ಕ್ರಮದಲ್ಲಿ ಕ್ಷೇತ್ರ ಶಿಕ್ಷಣ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಪ್ರಾಥಮಿಕ ಸಮುದಾಯ ಆರೋಗ್ಯ ಕಾರ್ಯಕರ್ತರು, ಆರೋಗ್ಯ ನಿರೀಕ್ಷಣಾಧಿಕಾರಿ, ಸಮುದಾಯ ಆರೋಗ್ಯ ಅಧಿಕಾರಿ, ಆಸ್ಪತ್ರೆಯ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತರುಗಳು ಭಾಗವಹಿಸಿದ್ದರು.