ಕುಶಾಲನಗರ, ಏ. ೩೦: ರಾಜ್ಯಮಟ್ಟದ ಕಾಯಕಯೋಗಿ ಪ್ರಶಸ್ತಿಗೆ ಭಾಜನರಾದ ಕುಶಾಲನಗರದ ಪಟ್ಟಣ ಪಂಚಾಯಿತಿ ಕಾರ್ಮಿಕ ಹೆಚ್.ಎನ್. ಮೋಹನ್‌ಕುಮಾರ್ ಅವರನ್ನು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.
ಕುಶಾಲನಗರದ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಂಚಾಯಿತಿ ಅಧ್ಯಕ್ಷ ಜಯವರ್ಧನ್ ಉಪಸ್ಥಿತಿಯಲ್ಲಿ ಪರಿಷತ್ತಿನ ಕೊಡಗು ಜಿಲ್ಲಾ ಅಧ್ಯಕ್ಷೆ ವನಿತಾ ಚಂದ್ರಮೋಹನ್ ಅವರು ಮೋಹನ್ ಕುಮಾರ್ ಅವರನ್ನು ಸನ್ಮಾನಿಸಿದರು.
ಈ ಸಂದರ್ಭ ಪಟ್ಟಣ ಪಂಚಾಯಿತಿ ಸದಸ್ಯರುಗಳಾದ ವಿ.ಎಸ್. ಆನಂದ್‌ಕುಮಾರ್, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸುರೇಶ್, ಸದಸ್ಯರಾದ ಕೆ.ಜಿ. ಮನು, ಪರಿಷತ್ ಸದಸ್ಯರಾದ ಬೋಸ್ ಮೊಣ್ಣಪ್ಪ, ಚಂದ್ರು, ಚೈತನ್ಯ ಮತ್ತು ಸಿಬ್ಬಂದಿಗಳು ಇದ್ದರು.