ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ
ಶಿವಮೊಗ್ಗ, ಮೇ ೨: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬೆಂಗಳೂರು ಭೇಟಿಗೂ ಮುನ್ನ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೋಮವಾರ ಸ್ಪಷ್ಟವಾಗಿ ತಳ್ಳಿಹಾಕಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಅಮಿತ್ ಶಾ ಅವರು 'ಖೇಲೋ ಇಂಡಿಯಾ' ಸಮಾರೋಪ ಸಮಾರಂಭ ಹಾಗೂ ಬಸವ ಜಯಂತಿ ಕಾರ್ಯಕ್ರಮ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸುತ್ತಿದ್ದಾರೆ. ನಾನು ಅವರನ್ನು ಭೇಟಿ ಮಾಡುತ್ತೇನೆ, ಅವರು ರಾಜ್ಯದ ರಾಜಕೀಯ ಪರಿಸ್ಥಿತಿಯ ಬಗ್ಗೆ ತಿಳಿದುಕೊಳ್ಳಲಿದ್ದಾರೆ. ಮುಂದೆ ವಿಧಾನಸಭೆ ಚುನಾವಣೆ ಇರುವ ಕಾರಣ, ಪ್ರಧಾನಿ ಮತ್ತು ಅಮಿತ್ ಶಾ ಅವರು ಕರ್ನಾಟಕಕ್ಕೆ ಹೆಚ್ಚಿನ ಆದ್ಯತೆ ನೀಡಲು ನಿರ್ಧರಿಸಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾವು ನಿಗದಿಪಡಿಸಿರುವ ೧೫೦ ಸ್ಥಾನಗಳ ಗುರಿ ತಲುಪಲು ಸಲಹೆ ನೀಡಲಿದ್ದಾರೆ ಎಂದು ಯಡಿಯೂರಪ್ಪ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಊಹಾಪೋಹಗಳ ಕುರಿತು ವರದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ, ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತಮ ಕೆಲಸ ಮಾಡುತ್ತಿದ್ದು, ನನ್ನ ಪ್ರಕಾರ ನಾಯಕತ್ವ ಬದಲಾವಣೆ ಆಗುವುದಿಲ್ಲ ಎಂದರು. ಕೆಲವು ಹಾಲಿ ಶಾಸಕರಿಗೆ ಮುಂಬರುವ ಚುನಾವಣೆಯಲ್ಲಿ ಪಕ್ಷದ ಟಿಕೆಟ್ ಸಿಗದೇ ಇರಬಹುದು ಎಂದಿರುವ ಬಿಜೆಪಿ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಈ ವಿಷಯದ ಬಗ್ಗೆ ಚರ್ಚಿಸಲು ನಾನು ಇಷ್ಟಪಡುವುದಿಲ್ಲ. ಈ ಬಗ್ಗೆ ಪಕ್ಷದ ಕೇಂದ್ರ ನಾಯಕತ್ವ ನಿರ್ಧರಿಸುತ್ತದೆ ಎಂದರು.
ಕರ್ನಾಟಕದ ಒಂದಿAಚು ಭೂಮಿಯನ್ನು ಕೊಡುವುದಿಲ್ಲ - ಸಿಎಂ
ಬೆAಗಳೂರು, ಮೇ ೨: ಮಹಾರಾಷ್ಟçದ ರಾಜಕಾರಣಿಗಳು ತಮ್ಮ ರಾಜಕೀಯ ಉಳಿವಿಗಾಗಿ ಭಾಷೆ ಅಥವಾ ಗಡಿ ವಿವಾದವನ್ನು ಬಳಸಿಕೊಳ್ಳಬೇಡಿ ಎಂದು ಒತ್ತಾಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನೆರೆಯ ರಾಜ್ಯಕ್ಕೆ ಕರ್ನಾಟಕ ತನ್ನ ಒಂದು ಇಂಚು ಭೂಮಿಯನ್ನು ಸಹ ಕೊಡುವುದಿಲ್ಲ ಎಂದು ಸೋಮವಾರ ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ಮಹಾರಾಷ್ಟç ಡಿಸಿಎಂ ಅಜಿತ್ ಪವಾರ್ ಅವರು ಕರ್ನಾಟಕದ ಗಡಿ ವಿಚಾರದ ಬಗ್ಗೆ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ, ನಮ್ಮ ಒಂದಿAಚೂ ಜಾಗವನ್ನೂ ಬಿಟ್ಟು ಕೊಡುವುದಿಲ್ಲ. ಮಹಾರಾಷ್ಟçದಲ್ಲಿ ರಾಜಕಾರಣ ಯಾವಾಗ ಇಕ್ಕಟ್ಟಿಗೆ ಸಿಲುಕುತ್ತದೋ ಆಗ ಕರ್ನಾಟಕದ ಗಡಿ ವಿಚಾರದ ಬಗ್ಗೆ ಅವರು ಮಾತನಾಡುತ್ತಾರೆ ಎಂದರು. ಕನ್ನಡ ಮಾತನಾಡುವ ಪ್ರದೇಶಗಳು ಮಹಾರಾಷ್ಟ್ರದಲ್ಲೂ ಇವೆ. ಅವುಗಳನ್ನು ಹೇಗೆ ತೆಗೆದುಕೊಳ್ಳಬೇಕು ಅಂತ ನಾವು ಯೋಚಿಸುತ್ತಿದ್ದೇವೆ ಎಂದು ಸಿಎಂ ಬೊಮ್ಮಾಯಿ, ಅಜಿತ್ ಪವಾರ್ ಅವರಿಗೆ ತಿರುಗೇಟು ನೀಡಿದ್ದಾರೆ. ಗಡಿ ವಿಚಾರದಲ್ಲಿ ಕರ್ನಾಟಕದ ನಿಲುವು ಸ್ಪಷ್ಟವಾಗಿದ್ದು, ನಾವು ಯಾವುದಕ್ಕೂ ಮಣಿಯುವುದಿಲ್ಲ. ನಮ್ಮ ನಿರ್ಧಾರಗಳಿಗೆ ನಾವು ದೃಢವಾಗಿ ನಿಲ್ಲುತ್ತೇವೆ ಎಂಬುದು ಅವರಿಗೂ (ಮಹಾರಾಷ್ಟç) ತಿಳಿದಿದೆ. ಮಹಾರಾಷ್ಟçದ ರಾಜಕಾರಣಿಗಳು ತಮ್ಮ ರಾಜಕೀಯ ಉಳಿವಿಗಾಗಿ ಭಾಷೆ ಅಥವಾ ಗಡಿ ಸಮಸ್ಯೆಯನ್ನು ಬಳಸಬೇಡಿ ಎಂದು ನಾನು ಬಲವಾಗಿ ಒತ್ತಾಯಿಸುತ್ತೇನೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ - ಮತ್ತೋರ್ವ ಆರೋಪಿ ಶರಣು
ಕಲಬುರಗಿ, ಮೇ ೨: ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಪಿಎಸ್ಐ ಪರೀಕ್ಷೆಯ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬAಧಿಸಿದAತೆ ಮತ್ತೋರ್ವ ಪ್ರಮುಖ ಆರೋಪಿಯ ಬಂಧನವಾಗಿದ್ದು, ಆಕ್ರಮ ನಡೆದ ಜ್ಞಾನಜ್ಯೋತಿ ಶಾಲೆಯ ಮುಖ್ಯೋಪಾಧ್ಯಾಯ ಕಾಶೀನಾಥ್ ಸೋಮವಾರ ಪೊಲೀಸರಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ೨೨ ದಿನಗಳಿಂದ ತಲೆಮರೆಸಿಕೊಂಡಿದ್ದ ಕಾಶೀನಾಥ್, ಸೋಮವಾರ ಬೆಳಿಗ್ಗೆ ೮.೩೦ ರ ಸುಮಾರಿಗೆ ಸಿಐಡಿ ತಂಡದ ಎದುರಿಗೆ ಶರಣಾಗಿದ್ದು, ಆ ಮೂಲಕ ಶಾಲೆಯಲ್ಲಿನ ಅಕ್ರಮಕ್ಕೆ ಸಂಬAಧಿಸಿದ ಬಹುತೇಕರು ಈಗ ಬಂಧನವಾದAತಾಗಿದೆ. ಈ ಮೂಲಕ ಈ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ೨೬ಕ್ಕೆ ಏರಿದಂತಾಗಿದೆ. ಜ್ಞಾನಜ್ಯೋತಿ ಶಾಲೆಯ ಮುಖ್ಯೋಪಾಧ್ಯಾಯ ಕಾಶಿನಾಥ್ಮೂಲಗಳ ಪ್ರಕಾರ ಒಎಂಆರ್ ಶೀಟ್ ತಿದ್ದುಪಡಿ ಹಾಗೂ ಬ್ಲೂಟೂತ್ ಬಳಕೆಯಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಕಾಶೀನಾಥ್ ಪ್ರಮುಖ ಪಾತ್ರ ವಹಿಸಿದ್ದ ಎನ್ನಲಾಗಿದೆ. ಜ್ಞಾನಜ್ಯೋತಿ ಶಾಲೆಯ ಮುಖ್ಯಸ್ಥೆ ಹಾಗೂ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಅಕ್ರಮದಲ್ಲಿ ಶಾಲೆಯ ಮುಖ್ಯ ಗುರು ಕಾಶೀನಾಥ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಸಿಐಡಿ ತಂಡದ ಎದುರು ಹೇಳಿದ್ದರಿಂದ ಕಾಶೀನಾಥ್ ಶರಣಾಗತಿ ಅತ್ಯಂತ ಮಹತ್ವ ಪಾತ್ರ ವಹಿಸಿದೆ.
ದೇಶದಲ್ಲಿ ಉಷ್ಣ ಅಲೆ ಅಂತ್ಯ
ನವದೆಹಲಿ, ಮೇ ೨: ದೇಶದ ಬಹುತೇಕ ಪ್ರದೇಶಗಳಲ್ಲಿ ಉಷ್ಣ ಅಲೆ ಅಂತ್ಯವಾಗಿದ್ದು, ಸೋಮವಾರ ಭಾರತೀಯ ಹವಾಮಾನ ಇಲಾಖೆಯು ಉತ್ತರ ಭಾರತಕ್ಕೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ. ದೆಹಲಿ, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶ ಸೇರಿದಂತೆ ಭಾರತದ ಬಹುತೇಕ ಭಾಗಗಳಲ್ಲಿ ಬಿಸಿಗಾಳಿಯು ಅಂತ್ಯಗೊಳ್ಳುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯ ಹಿರಿಯ ವಿಜ್ಞಾನಿ ಆರ್.ಕೆ ಜೇನಮಣಿ ಅವರು ಹೇಳಿದ್ದಾರೆ. ಆದಾಗ್ಯೂ, ಪಶ್ಚಿಮ ರಾಜಸ್ಥಾನ ಮತ್ತು ವಿದರ್ಭದಲ್ಲಿ ಉಷ್ಣ ಅಲೆ ಆವರಿಸುವ ಸಾಧ್ಯತೆಗಳಿವೆ ಎಂದು ಎಚ್ಚರಿಸಿದ್ದಾರೆ. ನಾವು ಊಹಿಸಿದಂತೆ ಒಡಿಶಾ ಮತ್ತು ಬಂಗಾಳದಲ್ಲಿ ಬಿಸಿಗಾಳಿಯು ಏಪ್ರಿಲ್ ೩೦ ರಂದು ಅಂತ್ಯವಾಗಿದೆ. ಇನ್ನೆರಡು ಮೂರು ದಿನಗಳಲ್ಲಿ ಬಲವಾದ ಗಾಳಿ ಬೀಸಲಿದೆ. ಪಶ್ಚಿಮದಲ್ಲಿ ಪ್ರಕ್ಷುಬ್ಧತೆ ಇರುವುದರಿಂದ ನಾವು ವಾಯುವ್ಯ ಭಾರತಕ್ಕೂ ಯೆಲ್ಲೊ ಎಚ್ಚರಿಕೆ ನೀಡುತ್ತಿದ್ದೇವೆ ಎಂದು ಜೇನಮಣಿ ಅವರು ತಿಳಿಸಿದ್ದಾರೆ.
ಮಹಾರಾಷ್ಟç ಸಚಿವ ನವಾಬ್ ಮಲಿಕ್ ಆರೋಗ್ಯದಲ್ಲಿ ಏರುಪೇರು
ಮುಂಬೈ, ಮೇ ೨: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿಯಿಂದ ಬಂಧನಕ್ಕೊಳಗಾಗಿರುವ ಮಹಾರಾಷ್ಟç ಸಚಿವ ನವಾಬ್ ಮಲಿಕ್ ಅವರ ಆರೋಗ್ಯ ಹದಗೆಟ್ಟಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಮಲಿಕ್ ಅವರ ವಕೀಲರು ಹೇಳಿದ್ದಾರೆ. ನವಾಬ್ ಮಲಿಕ್ ಜ್ವರ ಮತ್ತು ಅತಿಸಾರದಿಂದ ಅನಾರೋಗ್ಯಕ್ಕೆ ಒಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಸಚಿವರ ಪರ ವಕೀಲರು ಇಲ್ಲಿನ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಕಳೆದ ವಾರ, ಇಲ್ಲಿನ ಆರ್ಥರ್ ರೋಡ್ ಜೈಲಿನಲ್ಲಿದ್ದ ನವಾಬ್ ಮಲಿಕ್ (೬೨) ಅವರು ವೈದ್ಯಕೀಯ ಕಾರಣಕ್ಕಾಗಿ ಮಧ್ಯಂತರ ಜಾಮೀನು ನೀಡುವಂತೆ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ನವಾಬ್ ಮಲಿಕ್ ಅವರ ಕುಟುಂಬದವರು ಊಟ ನೀಡಲು ಹೋದಾಗ ಅನಾರೋಗ್ಯದ ಕಾರಣ ಜೆಜೆ ಆಸ್ಪತ್ರೆಗೆ ದಾಖಲಾಗಿರುವ ವಿಚಾರ ತಿಳಿದು ಬಂದಿದೆ ಎಂದು ವಕೀಲ ಕುಶಾಲ್ ಮೋರ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಕಳೆದ ಮೂರು ದಿನಗಳಿಂದ ಮಲಿಕ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಮತ್ತು ಅವರ ಸ್ಥಿತಿ ಹದಗೆಟ್ಟಿದೆ ಮತ್ತು ಗಂಭೀರವಾಗಿದೆ ಎಂದು ಮೊರ್ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ. ಜೆಜೆ ಆಸ್ಪತ್ರೆಯಲ್ಲಿ ಹಲವಾರು ವೈದ್ಯಕೀಯ ಪರೀಕ್ಷಾ ಸೌಲಭ್ಯಗಳು ಲಭ್ಯವಿಲ್ಲ ಎಂದು ಹೇಳಿದ ವಕೀಲರು ಮಲಿಕ್ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಬೇಕೆAದು ಮನವಿ ಮಾಡಿದ್ದಾರೆ. ಮಲಿಕ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಜೈಲು ಅಧಿಕಾರಿಗಳು ಕೋರ್ಟ್ಗೆ ಮಾಹಿತಿ ನೀಡದಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ವಿಶೇಷ ನ್ಯಾಯಾಧೀಶ ಆರ್ ಎನ್ ರೋಕಡೆ ಅವರು, ವರದಿ ನೀಡುವಂತೆ ಆಸ್ಪತ್ರೆ ಸೂಚಿಸಿ ಪ್ರಕರಣದ ವಿಚಾರಣೆಯನ್ನು ಮೇ ೫ಕ್ಕೆ ಮುಂದೂಡಿದ್ದಾರೆ.