ಸೋಮವಾರಪೇಟೆ, ಮೇ ೨: ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ತಾ. ೫ರಂದು ಪಟ್ಟಣದ ಸಫಾಲಿ ಸಭಾಂಗಣದಲ್ಲಿ ರೈತರ ಸಭೆ ಆಯೋಜಿಸಲಾಗಿದೆ ಎಂದು ಸಂಘದ ಸಂಚಾಲಕ ಲಕ್ಷö್ಮಣ್ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ ೧೧ ಗಂಟೆಗೆ ಸಭೆ ಆರಂಭಗೊಳ್ಳಲಿದ್ದು, ರೈತರು ಎದುರಿಸುತ್ತಿರುವ ಸಮಸ್ಯೆ, ಈಡೇರದ ಉಚಿತ ವಿದ್ಯುತ್ ಬೇಡಿಕೆ, ಅಸಮರ್ಪಕ ಪರಿಹಾರ ಸೇರಿದಂತೆ ಇನ್ನಿತರ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಸಭೆಯಲ್ಲಿ ಚರ್ಚೆ ನಡೆಸಲಾಗುವುದು.

ಸಭೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ, ಉಪಾಧ್ಯಕ್ಷ ಶಂಕರಪ್ಪ, ಪ್ರಧಾನ ಕಾರ್ಯದರ್ಶಿ ಬೋಪಯ್ಯ ಸೇರಿದಂತೆ ಇತರರು ಭಾಗವಹಿಸಲಿ ದ್ದಾರೆ ಎಂದು ಲಕ್ಷö್ಮಣ್ ತಿಳಿಸಿದ್ದಾರೆ.