ಮಡಿಕೇರಿ, ಮೇ ೨: ಹಾಕತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವೇಶನ ರಹಿತರಿಗೆ ಶಾಸಕ ಕೆ.ಜಿ.ಬೋಪಯ್ಯ ಅವರು ಶನಿವಾರ ಹಕ್ಕು ಪತ್ರ ವಿತರಿಸಿದರು.
ಹಾಕತ್ತೂರು ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹಕ್ಕುಪತ್ರ ವಿತರಿಸಿ ಮಾತನಾಡಿದ ಶಾಸಕರು, ಪ್ರತೀ ಬಡ ಕುಟುಂಬಗಳಿಗೂ ನಿವೇಶನ ರಹಿತರಿಗೆ ನಿವೇಶನ ಒದಗಿಸುವುದು, ಹಾಗೆಯೇ ಮನೆ ನಿರ್ಮಾಣ ಮಾಡಿಕೊಡುವ ನಿಟ್ಟಿನಲ್ಲಿ ಸರ್ಕಾರ ಎಲ್ಲಾ ರೀತಿಯ ಅಗತ್ಯ ಕ್ರಮವಹಿಸಿದೆ ಎಂದು ತಿಳಿಸಿದರು.
ಹಾಕತ್ತೂರು ಗ್ರಾ.ಪಂ.ವ್ಯಾಪ್ತಿಯ ೨೯ ಕುಟುಂಬದವರಿಗೆ ನಿವೇಶನದ ಹಕ್ಕುಪತ್ರ ಒದಗಿಸಲಾಗಿದೆ. ನಿವೇಶನ ಇಲ್ಲದ ಕುಟುಂಬಗಳಿಗೆ ನಿವೇಶನ ಹಾಗೂ ವಸತಿ ಕಲ್ಪಿಸಲಾಗುವುದು ಎಂದು ಶಾಸಕರು ಹೇಳಿದರು.
ತಾ.ಪಂ.ಇಒ ಶೇಖರ್, ಹಾಕತ್ತೂರು ಗ್ರಾ.ಪಂ.ಅಧ್ಯಕ್ಷೆ ಸವಿತಾ, ಉಪಾಧ್ಯಕ್ಷ ಕಿರಣ್, ಪಿಡಿಒ ಚಂಗಪ್ಪ, ತ್ರಿನೇತ್ರ ಯುವಕ ಸಂಘದ ಅಧ್ಯಕ್ಷ ಪಿ.ಪಿ.ಸುಕುಮಾರ ಇತರರು ಇದ್ದರು.