ಮಡಿಕೇರಿ, ಮೇ. ೨: ತಾಲೂಕು ಬಾಲಭವನ ಸಮಿತಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮಡಿಕೇರಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ, ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ವತಿಯಿಂದ ತಾ.೨೮ರಂದು ಮೂರ್ನಾಡಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸುಮಾರು ೭೦ ಮಕ್ಕಳಿಗಾಗಿ ಏರ್ಪಡಿಸಿರುವ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಲಾಯಿತು. ಯೋಗ, ನೃತ್ಯ, ಚಿತ್ರಕಲೆ, ಕರಕುಶಲ ಕಲೆ ಮತ್ತು ಕಸದಿಂದ ರಸ ಚಟುವಟಿಕೆಯಲ್ಲಿ ಮಕ್ಕಳು ಬಹಳ ಉತ್ಸಾಹದಿಂದ ತೊಡಗಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತ ಚಂದ್ರಶೇಖರ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಂದ್ರಮೌಳಿ, ಸಂಪನ್ಮೂಲ ವ್ಯಕ್ತಿ ಮಹೇಶ್, ವರ್ಷಿಣಿ, ಭುವನ, ಮೇಲ್ವಿಚಾರಕಿ ಮೇಪಾಡಂಡ ಸವಿತ ಕೀರ್ತನ್, ಅಂಗನವಾಡಿ ಕಾರ್ಯಕರ್ತೆಯವ ರಾದ ಜಯಂತಿ, ಉಮಾ, ಚೈತ್ರ, ಭವ್ಯ, ಆಶಾ ಹಾಗೂ ಅಜಿತ ಅವರು ಪಾಲ್ಗೊಂಡಿದ್ದರು.