*ಗೋಣಿಕೊಪ್ಪ, ಮೇ ೨: ಭಾನುವಾರ ಸುರಿದ ಬಾರಿ ಮಳೆಗೆ ಬಲ್ಯಮುಂಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಚಿಮಾಡ ಲಲಿತಾ ಗಣಪತಿಯವರ ಮನೆ ಮೇಲೆ ಮರ ಬಿದ್ದು ಅಪಾರ ನಷ್ಟ ಸಂಭವಿಸಿದೆ. ಮಳೆಗೆ ಮನೆಯ ಒಳಭಾಗದಲ್ಲಿ ನೀರು ತುಂಬಿ ವಾಸಿಸಲು ಸಾಧ್ಯವಾಗದ ಅತಂತ್ರ ಸ್ಥಿತಿಯಲ್ಲಿದ್ದರು. ಪರಿಸ್ಥಿತಿಯನ್ನು ಮನಗಂಡ ವೀರಾಜಪೇಟೆ ವಿಧಾನಸಭಾ ಕ್ಷೇತ್ರ ಶಾಸಕ ಕೆ.ಜಿ. ಬೋಪಯ್ಯ ಅವರು ಭೇಟಿ ನೀಡಿ ಮನೆ ಮೇಲೆ ಮರಬಿದ್ದು ಉಂಟಾದ ನಷ್ಟದ ಬಗ್ಗೆ ಪರಿಶೀಲನೆ ನಡೆಸಿ ಕಂದಾಯ ಇಲಾಖೆಯಿಂದ ಸೂಕ್ತವಾದ ಪರಿಹಾರ ಒದಗಿಸಿಕೊಡುವ ಭರವಸೆಯನ್ನು ನೀಡಿ ಕುಟುಂಬಸ್ಥರಿಗೆ ಆತ್ಮಸ್ಥೆöÊರ್ಯವನ್ನು ತುಂಬಿದರು. ಈ ಸಂದರ್ಭದಲ್ಲಿ ಪೊನ್ನಂಪೇಟೆ ಎ.ಪಿ.ಸಿ.ಎಂ.ಎಸ್. ಬ್ಯಾಂಕ್ ಅಧ್ಯಕ್ಷ ಮುದ್ದಿಯಡ ಮಂಜು ಗಣಪತಿ, ಮಾಚಿಮಾಡ ನರೇಂದ್ರ, ಶಾಸಕರ ಆಪ್ತ ಕಾರ್ಯದರ್ಶಿ ಮಲ್ಲಂಡ ಮಧುದೇವಯ್ಯ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು, ಗ್ರಾಮಸ್ಥರು ಹಾಜರಿದ್ದರು.