*ಗೋಣಿಕೊಪ್ಪ, ಮೇ ೩: ಎರಡು ಕೋಟಿ ಅನುದಾನದಲ್ಲಿ ಗೋಣಿಕೊಪ್ಪ ಪಂಚಾಯಿತಿ ವ್ಯಾಪ್ತಿಯ ೮ ವಾರ್ಡ್ಗಳ ಅಭಿವೃದ್ಧಿ ಕಾಮಗಾರಿಗಳಿಗೆ ರಾಜ್ಯ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಕೆ.ಜಿ. ಬೋಪಯ್ಯ ಅವರು ಪೂಜೆ ನೆರವೇರಿಸಿದರು.

ಗೋಣಿಕೊಪ್ಪ ಮಾರುಕಟ್ಟೆ ರಸ್ತೆಯನ್ನು ಕಾಂಕ್ರಿಟ್ ರಸ್ತೆಯಾಗಿ ಮಾರ್ಪಡಿಸುವ ಕಾಮಗಾರಿಗೆ ಚಾಲನೆ ನೀಡಿದರು.

ಪಿ.ಡಬ್ಲೂö್ಯಡಿ ಇಲಾಖೆಯಿಂದ ೧೦ ಲಕ್ಷ ಹಾಗೂ ಪರಿಶಿಷ್ಟ ಜಾತಿ, ಕಾಲೋನಿ ರಸ್ತೆ ಅಭಿವೃದ್ಧಿ ಅನುದಾನದಲ್ಲಿ ೫ ಲಕ್ಷ ಮತ್ತು ಶಾಸಕರ ಅನುದಾನದಲ್ಲಿ ೫ ಲಕ್ಷ ಸೇರಿದಂತೆ ಒಟ್ಟು ೨೦ ಲಕ್ಷ ವೆಚ್ಚದಲ್ಲಿ ಮಾರುಕಟ್ಟೆ ರಸ್ತೆ ಕಾಂಕ್ರೀಟೀಕರಣ ಗೊಳ್ಳಲಿದೆ.

ಅಲ್ಲದೇ ಪಂಚಾಯಿತಿ ವ್ಯಾಪ್ತಿಯ ೮ ವಾರ್ಡ್ಗಳಿಗೂ ಅನುದಾನ ಒದಗಿಸಲಾಗಿದ್ದು, ಹಂತ ಹಂತವಾಗಿ ಅಭಿವೃದ್ಧಿ ಕಾರ್ಯಗಳು ನಡೆಯಲಿವೆ. ಬೇಡಿಕೆಗೆ ಅನುಗುಣವಾಗಿ ಅನುದಾನವನ್ನು ಪೂರೈಸುವ ವ್ಯವಸ್ಥೆ ನಿರಂತರವಾಗಿ ನಡೆಯಲಿದೆ ಎಂದು ಹೇಳಿದರು.

ಪಂಚಾಯಿತಿ ಸದಸ್ಯರು ಜನರ ವಿಶ್ವಾಸಕ್ಕೆ ಅರ್ಹರಾಗಿ ಉತ್ತಮ ಸೇವೆಯನ್ನು ಗ್ರಾಮದ ಅಭಿವೃದ್ಧಿಗೆ ಸಲ್ಲಿಸಬೇಕೆಂದು ಈ ಸಂದರ್ಭ ಕಿವಿಮಾತು ಹೇಳಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚೈತ್ರಾ ಬಿ. ಚೇತನ್, ಸದಸ್ಯರುಗಳಾದ ನೂರೇರ ರತಿಅಚ್ಚಪ್ಪ, ಬಿ.ಎನ್. ಪ್ರಕಾಶ್, ಸೌಮ್ಯ ಬಾಲು, ರಾಜೇಶ್, ಹಕೀಮ್, ಗೀತಾ ಜಿ.ಕೆ., ವಿವೇಕ್ ರಾಯ್ಕರ್, ಶಕ್ತಿ ಕೇಂದ್ರದ ಪ್ರಮುಖ್ ಮಂಜು ರೈ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಿ.ಕೆ. ಬೋಪಣ್ಣ, ಕಾರ್ಯಕರ್ತ ಜಲೀಲ್, ಪಿಡಬ್ಲೂ÷್ಯಡಿ ಇಂಜಿನಿಯರ್ ಸಣ್ಣುವಂಡ ನವೀನ್, ಜಿಲ್ಲಾ ಪಂಚಾಯಿತಿ ಇಂಜಿನಿಯರ್ ಮಹಾದೇವ್, ಶಾಸಕರ ಆಪ್ತ ಕಾರ್ಯದರ್ಶಿ ಮಲ್ಲಂಡ ಮಧು ದೇವಯ್ಯ ಹಾಗೂ ಸಾರ್ವಜನಿಕರು ಹಾಜರಿದ್ದರು.