(ಹೆಚ್.ಕೆ. ಜಗದೀಶ್)
ಗೋಣಿಕೊಪ್ಪಲು, ಮೇ ೩: ಯರವ ಸಮಾಜದ ಕ್ರೀಡಾಕೂಟವು ಈ ಬಾರಿ ತಿತಿಮತಿ ಶಾಲಾ ಮೈದಾನದಲ್ಲಿ ನಡೆಯಲಿದೆ. ಜಿಲ್ಲೆಯ ವಿವಿಧ ಭಾಗದಲ್ಲಿರುವ ಯರವ ಸಮುದಾಯದ ಜನಾಂಗವನ್ನು ಒಂದೇ ವೇದಿಕೆಯಡಿ ತರುವ ಪ್ರಯತ್ನವಾಗಿ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ.
ಈ ಬಾರಿ ೧೦ನೇ ವರ್ಷದ ಕ್ರಿಕೆಟ್ ಪಂದ್ಯಾಟವು ಎವುಲ್ಲಾತ್ಲೇರಂಡ ಮನೆತನದ ಹೆಸರಿನಲ್ಲಿ ನಡೆಯಲಿದ್ದು, ಈಗಾಗಲೇ ಪಂದ್ಯಾಟಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಜಿಲ್ಲೆಯ ವಿವಿಧ ಭಾಗದಿಂದ ೬೨ ತಂಡಗಳು ಈ ಕ್ರೀಡಾಕೂಟದಲ್ಲಿ ಭಾಗಿಯಾಗಲಿವೆ.
ತಾ. ೪ ರಿಂದ (ಇಂದಿನಿAದ) ತಾ. ೮ ರವರೆಗೆ ಈ ಕ್ರೀಡೋತ್ಸವವು ನಡೆಯಲಿದ್ದು, ಮಹಿಳೆಯರಿಗಾಗಿಯೇ ವಿವಿಧ ಕ್ರೀಡೆಗಳನ್ನು ಆಯೋಜಿಸ ಲಾಗಿದೆ. ಸರ್ಕಾರದ ಅನುದಾನವಿಲ್ಲದೆ, ದಾನಿಗಳ ಸಹಕಾರದಿಂದ ಯರವ ಸಮಾಜದ ಯುವ ಉತ್ಸಾಹಿ ಯುವಕರು ತಮ್ಮ ದೈನಂದಿನ ಕೆಲಸ ಕಾರ್ಯಗಳನ್ನು ಬದಿಗೊತ್ತಿ ಸಮುದಾಯದ ಕ್ರೀಡೆಯ ಯಶಸ್ವಿಗೆ ದುಡಿಯುತ್ತಿ ದ್ದಾರೆ. ಕಳೆದ ಹತ್ತು ವರ್ಷ ಗಳ ಹಿಂದೆ ಆರಂಭ ಗೊಂಡ ಯರವ ಸಮಾಜದ ಕ್ರೀಡಾಕೂಟವು ವರ್ಷದಿಂದ ವರ್ಷಕ್ಕೆ ಆಕರ್ಷಣೀಯವಾಗಿ ಮೂಡಿ ಬರುತ್ತಿದೆ. ಸಮುದಾಯದ ಸಾಧಕರನ್ನು ಗುರುತಿಸಿ ವೇದಿಕೆಯಲ್ಲಿ ಅತಿಥಿಗಳ ಸಮ್ಮುಖದಲ್ಲಿ ಗೌರವಿಸಲಾಗುತ್ತದೆ. ಯರವ ಕುಣಿತ, ದುಡಿಕೊಟ್ಟು ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ನಡೆಯಲಿವೆ.
ತಾ. ೪ ರಂದು ಕ್ರೀಡಾಕೂಟಕ್ಕೆ ಚಾಲನೆ ದೊರೆಯಲಿದ್ದು, ಸಮಾಜ ಸೇವಕರು, ಕಾಫಿ ಬೆಳೆಗಾರರಾದ ಚೋಡುಮಾಡ ಶ್ಯಾಂ ಪೂಣಚ್ಚ ಕಾರ್ಯಕ್ರಮವನ್ನು ಉದ್ಘಾಟಿಸಲಿ ದ್ದಾರೆ. ೧೦ನೇ ವರ್ಷದ ಎವುಲ್ಲಾತ್ಲೇರಂಡ ಕ್ರಿಕೆಟ್ ಕಪ್ ಉದ್ಘಾಟನಾ ಪಂದ್ಯಕ್ಕೆ ನಿಟ್ಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಚೆಕ್ಕೇರ ಸೂರ್ಯ ಅಯ್ಯಪ್ಪ ಚಾಲನೆ ನೀಡಲಿದ್ದಾರೆ.
ಬೆಳಿಗ್ಗೆ ೧೦.೩೦ ಗಂಟೆಗೆ ಯರವ ಸಮಾಜದ ಅಧ್ಯಕ್ಷ ವೈ.ಎಂ. ರವಿ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ, ಉದ್ಯಮಿ ಎಂ.ಜಿ. ಮೋಹನ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಆರ್. ಪಂಕಜ, ಸಿ.ಕೆ. ಬೋಪಣ್ಣ, ಮೂಕೊಂಡ ವಿಜು ಸುಬ್ರಮಣಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯರುಗಳಾದ ಕುಟ್ಟಂಡ ಅಜಿತ್ ಕರುಂಬಯ್ಯ, ಪ್ರಕಾಶ್, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಕೊಣಿಯಂಡ ಅಪ್ಪಣ್ಣ, ತಾಲೂಕು ಗಿರಿಜನ ಕಲ್ಯಾಣಾಧಿಕಾರಿ ಗುರುಶಾಂತಪ್ಪ, ನಿಟ್ಟೂರು ಗ್ರಾಮ ಪಂಚಾಯಿತಿ ಸದಸ್ಯರಾದ ಕಾಟಿಮಾಡ ಶರೀನ್ ಮುತ್ತಣ್ಣ, ಚೆನ್ನಂಗಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವಿ.ವಿ. ವೇಣುಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ತಾ. ೮ ರಂದು ಸಮಾರೋಪ ಸಮಾರಂ¨ ನಡೆಯಲಿದ್ದು, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಸದಸ್ಯರಾದ ಶಾಂತೆಯAಡ ವೀಣಾ ಅಚ್ಚಯ್ಯ, ಮಂಡೇಪAಡ ಸುಜಾ ಕುಶಾಲಪ್ಪ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಗುಮ್ಮಟ್ಟೀರ ಕಿಲನ್ ಗಣಪತಿ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಹಾತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಪ್ಪಂಡ ಗಿರಿ ಪೂವಣ್ಣ, ತಿತಿಮತಿ ಲ್ಯಾಂಪ್ ಸೊಸೈಟಿಯ ಅಧ್ಯಕ್ಷ ಮಣಿಕುಂಞ, ತಿತಿಮತಿ ಗ್ರಾ.ಪಂ. ಸದಸ್ಯ ಚುಬ್ರು, ಪೊನ್ನಂಪೇಟೆ ಹೋರಾಟಗಾರ್ತಿ ತಾಯಮ್ಮ ಸೇರಿದಂತೆ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ. ವಿಜೇತ ತಂಡಕ್ಕೆ ನಗದು ಬಹುಮಾನ ಸೇರಿದಂತೆ ಆಕರ್ಷಕ ಟ್ರೋಫಿ ನೀಡಲಾಗುವುದು.