ಮಡಿಕೇರಿ, ಮೇ ೨: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ತಾ. ೫ರಂದು ನಾಪೋಕ್ಲು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕ.ಸಾ.ಪ. ಸಂಸ್ಥಾಪನಾ ದಿನ ಆಚರಿಸಲಾಗುತ್ತಿದೆ. ಅಧ್ಯಕ್ಷತೆ ಯನ್ನು ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ವಹಿಸಲಿದ್ದಾರೆ. ಸಂಸ್ಥಾಪನಾ ದಿನದ ಕುರಿತು ಚಿಕ್ಕಅಳುವಾರದ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದ ಕನ್ನಡ ಉಪನ್ಯಾಸಕ ಜಮೀರ್ ಅಹಮದ್ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ನಾಪೋಕ್ಲು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಅವನಿಜ ಸೋಮಯ್ಯ, ಮಡಿಕೇರಿ ತಾಲೂಕು ಕಸಾಪ ಅಧ್ಯಕ್ಷ ಅಂಬೆಕಲ್ ನವೀನ್, ನಾಪೋಕ್ಲು ಹೋಬಳಿ ನೂತನ ಅಧ್ಯಕ್ಷ ನೆರವಂಡ ಉಮೇಶ್ ಉಪಸ್ಥಿತರಿ ರುವರು. ಜಾನಪದ ಕಲಾವಿದ ಕೋಡಿಮಣಿಯಂಡ ಬೋಪಯ್ಯ ಅವರನ್ನು ಸನ್ಮಾನಿಸಲಾಗುತ್ತದೆ.

ಜಿಲ್ಲೆಯ ಐದು ತಾಲೂಕು ಕಸಾಪ ವತಿಯಿಂದ ಸಂಸ್ಥಾಪನಾ ದಿನ ಕಾರ್ಯಕ್ರಮ ನಡೆಯಲಿದ್ದು, ಐದೂ ತಾಲೂಕಿನಲ್ಲಿ ಉಪನ್ಯಾಸ ಮತ್ತು ಕಲಾವಿದರಿಗೆ ಸನ್ಮಾನ ನಡೆಯಲಿದೆ ಎಂದು ಕಸಾಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮದ್ ತಿಳಿಸಿದ್ದಾರೆ.