ಮಡಿಕೇರಿ, ಮೇ ೩: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಜೀವಜಲ ಯೋಜನೆಯಲ್ಲಿ ೨೦೨೧-೨೨ನೇ ಸಾಲಿಗೆ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಿದ್ದು, ಅರ್ಜಿ ಹಾಗೂ ದಾಖಲಾತಿಗಳನ್ನು ಸಲ್ಲಿಸಲು ಮೇ ೧೦ ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.