ಮಡಿಕೇರಿ, ಮೇ ೩: ಕನ್ನಡ ಸಾಹಿತ್ಯ ಪರಿಷತ್ತಿನ ೧೦೭ನೇ ಸಂಸ್ಥಾಪನಾ ದಿನವನ್ನು ತಾ. ೫ ರಂದು ಮಡಿಕೇರಿ ತಾಲೂಕು ಕ.ಸಾ.ಪ. ವತಿಯಿಂದ ಆಚರಿಸಲಾಗುವುದು.
ಅಂದು ಬೆಳಿಗ್ಗೆ ೧೧ ಗಂಟೆಗೆ ಫೀ.ಮಾ. ಕಾರ್ಯಪ್ಪ ವೃತ್ತ ಸಮೀಪದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ತಾಲೂಕು ಅಧ್ಯಕ್ಷ ನವೀನ್ ಅಂಬೆಕಲ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಕೇಶವ ಕಾಮತ್ ಉದ್ಘಾಟಿಸಲಿದ್ದಾರೆ. ಹಿರಿಯ ಸಾಹಿತಿ ಬಿ.ಎ. ಷಂಶುದ್ದೀನ್ ಉಪನ್ಯಾಸ ನೀಡಲಿದ್ದು, ಮುಖ್ಯ ಅತಿಥಿಗಳಾಗಿ ಸಾಹಿತಿ ಬಿ.ಆರ್. ಜೋಯಪ್ಪ, ವಕೀಲ ಮತ್ತು ಲೇಖಕ ಬಾಳೆಯಡ ಕಿಶನ್, ಕ.ಸಾ.ಪ. ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಗೌರವ ಕಾರ್ಯದರ್ಶಿಗಳಾದ ಎಸ್.ಐ. ಮುನೀರ್ ಅಹಮ್ಮದ್, ರೇವತಿ ರಮೇಶ್, ಅಭಿನಯ ಕಲಾ ಮಿಲನ ಚಾರಿಟೇಬಲ್ ಟ್ರಸ್ಟ್ನ ಮುಖ್ಯಸ್ಥೆ ಮಿಲನ ಭರತ್ ಅವರನ್ನು ಈ ಸಂದರ್ಭ ಸನ್ಮಾನಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.