ಮೋದಿ ನೇತೃತ್ವದಲ್ಲಿ ಜ್ಞಾನಾಧಾರಿತ ‘ಸೂಪರ್ ಪವರ್' ಭಾರತ ನಿರ್ಮಾಣ
ಬೆಂಗಳೂರು, ಮೇ ೩: ಭಾರತವನ್ನು ಸಶಕ್ತವಾಗಿ ಕಟ್ಟಿ ಜಾಗತಿಕ ಮಟ್ಟದಲ್ಲಿ ಪ್ರತಿಷ್ಠಾಪಿಸುವುದು ಮತ್ತು ಯುವಜನರಿಗೆ ಉಜ್ವಲ ಅವಕಾಶಗಳನ್ನು ಒದಗಿಸಬೇಕೆನ್ನುವುದೇ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಸಂಕಲ್ಪವಾಗಿದೆ. ಈ ಕ್ರಾಂತಿಕಾರಕ ಬದಲಾವಣೆಗಳನ್ನು ತರಲೆಂದೇ ನೂತನ ರಾಷ್ಟಿçÃಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗಿದ್ದು, ಭಾರತವನ್ನು ಜ್ಞಾನಾಧಾರಿತ `ಸೂಪರ್ ಪವರ್’ ಮಾಡಲಾಗುವುದು ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ. ಇಂದು ಕೇಂದ್ರ ಸರ್ಕಾರದ ರಾಷ್ಟಿçÃಯ ಉನ್ನತ ಶಿಕ್ಷಣ ಅಭಿಯಾನದಡಿ ಸ್ಥಾಪಿಸ ಲಾಗಿರುವ ನೃಪತುಂಗ ಏಕೀಕೃತ ವಿಶ್ವವಿದ್ಯಾಲಯವನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಅವರು ನೂತನ ವಿ.ವಿ. ಶೈಕ್ಷಣಿಕ ಸಮುಚ್ಚಯ ನಿರ್ಮಾಣಕ್ಕೆ ಶಂಕುಸ್ಥಾಪನೆ, ಲಾಂಛನ ಅನಾವರಣ ಮಾಡಿದರು. ಅಲ್ಲದೆ ಬಳ್ಳಾರಿಯಲ್ಲಿ ಸ್ಥಾಪಿಸಲಾಗಿರುವ ವಿಧಿವಿಜ್ಞಾನ ಪ್ರಯೋಗಾಲಯವನ್ನು ವರ್ಚುವಲ್ ಮೂಲಕ ಉದ್ಘಾಟಿಸಿದರು. ಬಳಿಕ ಸಚಿವರು, ದೇಶದಲ್ಲಿ ಸಂಭವಿಸುತ್ತಿರುವ ಶೈಕ್ಷಣಿಕ ಕ್ರಾಂತಿಯಲ್ಲಿ ಭಾರತೀಯ ಪ್ರಾದೇಶಿಕ ಭಾಷೆಗಳಿಗೆ ಮಹತ್ವದ ಸ್ಥಾನವಿದೆ. ಎನ್‌ಇಪಿಯನ್ನು ಕರ್ನಾಟಕವು ದೇಶದ ಮೊದಲ ರಾಜ್ಯವಾಗಿ ಜಾರಿಗೆ ತರುವ ಹೊಣೆಯನ್ನು ಸ್ವೀಕರಿಸಿರುವುದು ಶ್ಲಾಘನೀಯ ನಡೆಯಾಗಿದೆ. ವಿದ್ಯಾರ್ಥಿಗಳೇ ದೇಶದ ಭವಿಷ್ಯವಾಗಿದ್ದು, ಅವರಲ್ಲಿ ದೇಶಭಕ್ತಿಯ ಸಂಸ್ಕಾರವನ್ನು ಬೆಳೆಸಬೇಕಾಗಿದೆ ಎಂದರು. ಒಂದು ದೇಶ ದೊಡ್ಡ ದೊಡ್ಡ ಸಾಧನೆಗಳನ್ನು ಮಾಡಲು ವ್ಯಕ್ತಿಗಳ ಚಿಕ್ಕಚಿಕ್ಕ ಸಂಕಲ್ಪಗಳು ನಿರ್ಣಾಯಕ ಕೊಡುಗೆ ಕೊಡುತ್ತವೆ. ಈ ನಿಟ್ಟಿನಲ್ಲಿ, ದೇಶವನ್ನು ಪ್ರೀತಿಸು ವಂತಹ ಶಿಕ್ಷಣವನ್ನು ಎನ್‌ಇಪಿ ಅಡಿಯಲ್ಲಿ ಒದಗಿಸಲಾಗುವುದು. ಇದು ಸಂಪೂರ್ಣ ಭಾರತೀಯ ದೃಷ್ಟಿಕೋನವನ್ನು ಹೊಂದಿದೆ. ದೇಶದ ಪ್ರಗತಿಯ ದೃಷ್ಟಿಯಿಂದ ಮುಂದಿನ ೨೫ ವರ್ಷಗಳಿಗೆ ಅತಿಶಯ ಮಹತ್ವವಿದ್ದು, ಭಾರತವು ವಿಶ್ವಗುರು ಎನಿಸಿಕೊಳ್ಳುವುದು ನಿಶ್ಚಿತ ಎಂದು ಅವರು ಪ್ರತಿಪಾದಿಸಿದರು. ಈ ಸಂದರ್ಭ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇದು ಪರಿವರ್ತನೆಯ ಪರ್ವಕಾಲವಾಗಿದೆ. ಜನಸಂಖ್ಯೆಯಲ್ಲಿ ಶೇ.೪೬ರಷ್ಟಿರುವ ಯುವಜನರನ್ನು ದೇಶದ ಆಸ್ತಿಯೆಂದು ಭಾವಿಸಲಾಗಿದೆ. ಯುವಜನರಿಗೆ ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣ ಇವೇ ಸರಕಾರದ ಮೂಲಮಂತ್ರಗಳಾಗಿವೆ. ಕ್ಯಾಂಪಸ್ ಸಂದರ್ಶನ, ಸ್ವ-ಉದ್ಯೋಗಕ್ಕೆ ಒತ್ತು ಕೊಡುವುದರ ಜತೆಗೆ ಪ್ರತ್ಯೇಕ ಉದ್ಯೋಗ ನೀತಿಯನ್ನೇ ರಾಜ್ಯದಲ್ಲಿ ರೂಪಿಸಲಾಗಿದೆ ಎಂದರು. ನೃಪತುಂಗ ವಿಶ್ವ ವಿದ್ಯಾನಿಲಯಕ್ಕೆ ಕೇಂದ್ರ ಸರಕಾರವು ರೂ. ೫೫ ಕೋಟಿ ಅನುದಾನ ಮಂಜೂರು ಮಾಡಿದೆ. ಇದಕ್ಕೆ ಅಗತ್ಯವಿರುವ ಬಾಕಿ ಹಣವನ್ನು ರಾಜ್ಯ ಸರಕಾರ ಒದಗಿಸಲಿದೆ. ಕಾಲದ ಜತೆಯಲ್ಲಿ ಬದಲಾವಣೆಗೆ ತೆರೆದುಕೊಳ್ಳದೆ ಹೋದರೆ ಅವಕಾಶಗಳು ಕೈತಪ್ಪಿ ಹೋಗಲಿವೆ. ಹೀಗಾಗಿ, ರಾಜ್ಯದಲ್ಲಿ ಎನ್‌ಇಪಿ ಜಾರಿಗೊಳಿಸುತ್ತಿದ್ದು, ಪೂರ್ವ ಪ್ರಾಥಮಿಕ ಹಂತದಿAದ ಹಿಡಿದು ಸ್ನಾತಕೋತ್ತರ ಮಟ್ಟದವರೆಗೂ ಇನ್ನು ಮುಂದೆ ಸಮಗ್ರ ಪರಿವರ್ತನೆ ಕಾಣಿಸಿಕೊಳ್ಳಲಿದೆ ಎಂದು ಅವರು ಹೇಳಿದರು.
ಮಹಾರಾಷ್ಟçದಲ್ಲಿ ಮಿತಿಮೀರಿದ ತಾಪಮಾನ: ೨೫ ಮಂದಿ ಬಲಿ
ಮುಂಬೈ, ಮೇ ೩: ಮಹಾರಾಷ್ಟçದಲ್ಲಿ ಬಿಸಿಲ ಬೇಗೆಯು ಕಳೆದ ಮಾರ್ಚ್ ನಿಂದ ಇಲ್ಲಿಯವರೆಗೆ ಕನಿಷ್ಟ ೨೫ ಮಂದಿಯ ಜೀವ ಬಲಿ ತೆಗೆದು ಕೊಂಡಿದೆ. ಇದು ಕಳೆದ ಐದು ವರ್ಷಗಳಲ್ಲೇ ಅತಿ ಹೆಚ್ಚು ಸಾವಾಗಿದೆ. ಮಹಾರಾಷ್ಟçದಲ್ಲಿ ೪೬ ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಕಳೆದ ಮಾರ್ಚ್ನಿಂದ ಇದುವರೆಗೆ ಬಿಸಿಲಿನ ತಾಪಕ್ಕೆ ೨೫ ಮಂದಿ ಮೃತಪಟ್ಟಿದ್ದಾರೆ ಇದು ೨೦೧೬ ರಿಂದ ಇದುವರೆಗೆ ವರದಿಯಾದ ಅತಿ ಹೆಚ್ಚು ಸಾವಾಗಿದೆ. ಭಾರತದಲ್ಲಿ ಕಳೆದ ಏಪ್ರಿಲ್ ತಿಂಗಳಲ್ಲಿ ೧೨೨ ವರ್ಷಗಳ ಬಳಿಕ ಅಧಿಕ ತಾಪಮಾನ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಶುಕ್ರವಾರದವರೆಗೆ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪ್ರದೇಶ, ಪೂರ್ವ ಮಧ್ಯಪ್ರದೇಶ, ಬಿಹಾರ, ಒಡಿಶಾ, ಛತ್ತೀಸ್‌ಗಢ, ಮಹಾರಾಷ್ಟç, ಜಾರ್ಖಂಡ್ ಮತ್ತು ದಕ್ಷಿಣದ ಎಲ್ಲಾ ರಾಜ್ಯಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಇಲಾಖೆ ಹೇಳಿದೆ.
ಜೆಡಿಎಸ್ ತೊರೆದು ಬಿಜೆಪಿ ಸೇರಿದ ಬಸವರಾಜ ಹೊರಟ್ಟಿ
ಬೆಂಗಳೂರು, ಮೇ ೩: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಂಗಳವಾರ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದಾರೆ. ತಾಜ್ ವೆಸ್ಟೆಂಡ್ ಹೊಟೇಲ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೊರಟ್ಟಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ಜಗದೀಶ ಶೆಟ್ಟರ್, ಹಲವು ಸಚಿವರು, ಶಾಸಕರು ಉಪಸ್ಥಿತರಿದ್ದರು. ಜನತಾ ಪರಿವಾರದಲ್ಲಿ ರಾಜಕೀಯ ಜೀವನ ಆರಂಭಿಸಿದ್ದ ಹೊರಟ್ಟಿ, ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಸತತವಾಗಿ ಏಳು ಬಾರಿ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದಾರೆ. ಮುಂದಿನ ಚುನಾವಣೆ ಯನ್ನು ಬಿಜೆಪಿಯಿಂದ ಎದುರಿಸಲು ನಿರ್ಧರಿಸಿದ್ದಾರೆ. ಬಿಜೆಪಿ ಸೇರಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಬಸವರಾಜ ಹೊರಟ್ಟಿ, ಜೆಡಿಎಸ್ ಪಕ್ಷದ ಬಗ್ಗೆ ನನಗೆ ಒಳ್ಳೆಯ ಅಭಿಪ್ರಾಯವಿದೆ. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಮತದಾರರ ಅಭಿಪ್ರಾಯದಂತೆ ಬಿಜೆಪಿ ಸೇರಿದ್ದೇನೆ. ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದರು.