*ಗೋಣಿಕೊಪ್ಪ, ಮೇ ೩: ನಲವತ್ತೆöÊದು ಲಕ್ಷ ಅನುದಾನದಲ್ಲಿ ಕಾನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ತಡೆಗೋಡೆ ನಿರ್ಮಾಣ ಕಾಮಗಾರಿಗೆ ರಾಜ್ಯ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಕೆ.ಜಿ. ಬೋಪಯ್ಯ ಅವರು ಭೂಮಿಪೂಜೆ ನೆರವೇರಿಸಿದರು.
ಪಂಚಾಯಿತಿ ವ್ಯಾಪ್ತಿಯ ಕಾನೂರು, ನಿಡುಗುಂಬ ಸಂಪರ್ಕ ರಸ್ತೆಯ ತಡೆಗೋಡೆ ನಿರ್ಮಾಣ ಮತ್ತು ಕಾನೂರು ಫ್ರೆಂಡ್ಸ್ ಅಸೋಸಿಯೇಷನ್ ಆವರಣದಲ್ಲಿನ ತಡೆಗೋಡೆ ನಿರ್ಮಾಣಕ್ಕೆ ಶಾಸಕರು ಪೂಜೆ ನಡೆಸಿದರು.
ಕಾನೂರು ಫ್ರೆಂಡ್ಸ್ ಕ್ಲಬ್ಬಿನ ತಡೆಗೋಡೆ ನಿರ್ಮಾಣಕ್ಕೆ ಶಾಸಕರ ಅನುದಾನದಲ್ಲಿ ೫ ಲಕ್ಷ ಹಾಗೂ ಕಾನೂರು ನಿಡುಗುಂಬ ತಡೆಗೋಡೆ ನಿರ್ಮಾಣಕ್ಕೆ ೪೦ ಲಕ್ಷ ಅನುದಾನ ಒದಗಿಸಲಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ೧ ಕೋಟಿ ೮೮ ಲಕ್ಷ ಅನುದಾನವನ್ನು ನೀಡಲಾಗಿದ್ದು, ಹಂತ ಹಂತವಾಗಿ ಮಳೆಗಾಲ ಪ್ರಾರಂಭದ ಮುನ್ನ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು. ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಹಲವು ಪಂಚಾಯಿತಿಗಳಲ್ಲಿ ಅಭಿವೃದ್ಧಿ ಕಾರ್ಯ ಚಟುವಟಿಕೆಗಳು ನಡೆಯುತ್ತಿದೆ. ಗ್ರಾಮೀಣ ಅಭಿವೃದ್ಧಿ ಇಲಾಖೆಯಿಂದ ೧೫ ಕೋಟಿ, ಲೋಕೋಪಯೋಗಿ ಇಲಾಖೆಯ ೧೦ ಕೋಟಿ ಅನುದಾನ ದಲ್ಲಿ ನಾನಾ ಪಂಚಾಯಿತಿಗಳಲ್ಲಿ ಕಾಮಗಾರಿ ಪ್ರಾರಂಭಿಸಲಾಗಿದೆ. ಅಲ್ಲದೇ ಇನ್ನಿತರ ಅನುದಾನಗಳಲ್ಲಿಯೂ ಕಾಮಗಾರಿ ಚಟುವಟಿಕೆಗಳು ನಡೆಯುತ್ತಿವೆ ಎಂದರು.
ಕಾನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಂ.ಡಿ. ರಶ್ಮಿ, ಸದಸ್ಯ ಸುಳ್ಳಿಮಾಡ ದೀಪಕ್, ವಿ.ಎಸ್. ಎಸ್.ಎನ್. ಅಧ್ಯಕ್ಷ ಅಳಮೇಂಗಡ ವಿವೇಕ್, ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಮಾಚಿಮಾಡ.ಎನ್. ತಮ್ಮಯ್ಯ, ಮಾಜಿ ಅಧ್ಯಕ್ಷ ಚೆಪುö್ಪಡೀರ ಸೋಮಯ್ಯ, ಪ್ರಮುಖರಾದ ಅಳಮೇಂಗಡ ನವೀನ್, ಸುರೇಶ್, ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ರಫೀಕ್, ಪ್ರಮುಖ ರಾದ ಕಾಡ್ಯಮಾಡ ಭರತ್ ಮಾಚು, ಶಾಸಕರ ಆಪ್ತ ಕಾರ್ಯದರ್ಶಿ ಮಲ್ಲಂಡ ಮಧುದೇವಯ್ಯ ಹಾಗೂ ಗ್ರಾಮಸ್ಥರು ಇದ್ದರು.