ನಾಪೋಕ್ಲು, ಮೇ ೩: ಕನ್ನಡ ಸಾಹಿತ್ಯ ಪರಿಷತ್‌ನ ಮಡಿಕೇರಿ ತಾಲೂಕು ನಾಪೋಕ್ಲು ಹೋಬಳಿ ಘಟಕದ ನೂತನ ಅಧ್ಯಕ್ಷರಾಗಿ ನೆರವಂಡ ಉಮೇಶ್, ಪ್ರಧಾನ ಕಾರ್ಯದರ್ಶಿಯಾಗಿ ಪಿ.ವಿ. ಪ್ರಭಾಕರ್, ಗೌರವ ಕಾರ್ಯ ದರ್ಶಿಯಾಗಿ ನೆರೆಯಂಡಮ್ಮAಡ ಉಮಾ ಪ್ರಭು, ಕೋಶಾಧಿಕಾರಿ ಯಾಗಿ ಎಂ.ಎ. ಮನ್ಸೂರ್ ಅಲಿ ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ. ನಾಪೋಕ್ಲು ಪ್ರವಾಸಿ ಮಂದಿರ ದಲ್ಲಿ ನಡೆದ ರಚನಾ ಸಭೆಯಲ್ಲಿ ಇವರನ್ನು ಆಯ್ಕೆಗೊಳಿಸ ಲಾಯಿತು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೇಶವ ಕಾಮತ್ ಮಾತನಾಡಿ, ಇತ್ತೀಚೆಗೆ ಮಕ್ಕಳು ಹೆಚ್ಚಿನ ಸಮಯವನ್ನು ಮೊಬೈಲ್ ನೋಡುವದರ ಮೂಲಕ ಹಾಳು ಮಾಡುತ್ತಿದ್ದಾರೆ. ಅವರನ್ನು ಸಾಹಿತ್ಯ ಚಟುವಟಿಕೆಗಳಲ್ಲಿ ಅಳವಡಿಸಿ ಕೊಳ್ಳಬೇಕು. ಅವರಿಗೆ ಶಿಕ್ಷಕರು ಸಹಕಾರ ನೀಡಬೇಕು ಎಂದರು.
ಮಕ್ಕಳಿಗೆ ಸಾಹಿತ್ಯ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಹಾಗೂ ಗ್ರಾಮೀಣ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಬಾರಿ ರಾಜಾಸೀಟ್‌ನಲ್ಲಿ ರಸ ಸಂಜೆ ಕಾರ್ಯಕ್ರಮವನ್ನು ಆರಂಭಿಸಲು ಉದ್ದೇಶಿಸಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಸಂಬAಧಿಸಿದ ಅಧಿಕಾರಿ ಗಳೊಂದಿಗೆ ಮಾತುಕತೆ ನಡೆಸಲಾಗಿದೆ. ಮುಂದಿನ ತಿಂಗಳಿ ನಲ್ಲಿ ಅನುಮತಿ ದೊರೆಯಲಿದೆ ಎಂದು ಹೇಳಿದರು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಡಿಕೇರಿ ತಾಲೂಕು ಕಸಾಪ ಅಧ್ಯಕ್ಷ ಅಂಬೆಕಲ್ ನವೀನ್, ಎಲ್ಲಾ ಹೋಬಳಿ ಘಟಕಗಳು ಹೆಚ್ಚು ಹೆಚ್ಚು ಜನಪರ ಕಾರ್ಯ ಕ್ರಮಗಳನ್ನು ನಡೆಸಬೇಕು. ಇದಕ್ಕೆ ತಾಲೂಕು ಸಮಿತಿಯಿಂದ ಸಂಪೂರ್ಣ ಸಹಕಾರ ನೀಡಲಾಗುವದು ಎಂದರು.
ಪ್ರಾಸ್ತಾವಿಕವಾಗಿ ಮಾತ ನಾಡಿದ ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಜಿಲ್ಲೆಯಲ್ಲಿ ಸದಸ್ಯತ್ವ ಅಭಿಯಾನ ಆರಂಭಿಸಬೇಕು. ಈಗ ಜಿಲ್ಲೆಯಲ್ಲಿ ಎರಡು ಸಾವಿರ ಸದಸ್ಯರಿದ್ದು, ಇದನ್ನು ೧೦ ಸಾವಿರಕ್ಕೆ ಏರಿಸಬೇಕು. ಇದಕ್ಕೆ ಎಲ್ಲಾ ಘಟಕಗಳು ಕಾರ್ಯ ಪ್ರವೃತ್ತರಾಗಬೇಕು ಎಂದರು.
ಸಭೆಯಲ್ಲಿ ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ರೇವತಿ ರಮೇಶ್, ಮಡಿಕೇರಿ ತಾಲೂಕು ಕಸಾಪ ಗೌರವ ಕಾರ್ಯದರ್ಶಿ ರಂಜಿತ್ ಉಪಸ್ಥಿತರಿದ್ದರು. ಶ್ರೀರಕ್ಷಾ ನಾಡಗೀತೆ, ಜಿಲ್ಲಾ ಸಮಿತಿ ಸದಸ್ಯೆ ಕಡ್ಲೇರ ತುಳಸಿ ಮೋಹನ್ ಸ್ವಾಗತಿಸಿ, ನಿರೂಪಿಸಿದರೆ, ಪಿ.ವಿ. ಪ್ರಭಾಕರ್ ವಂದಿಸಿದರು.