ಮಡಿಕೇರಿ, ಮೇ ೩ : ಹನ್ನೆರಡನೇ ಶತಮಾನದಲ್ಲಿ ಬಸವೇಶ್ವರರು ಸಾಮಾಜಿಕ ಪರಿವರ್ತನೆ ಮಾಡಿ, ಸಮಾಜದಲ್ಲಿ ಸಮ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿದರು. ಆ ದಿಸೆಯಲ್ಲಿ ವಿಶ್ವಜ್ಞಾನಿ, ಜಗದ ಜ್ಯೋತಿ, ಭಕ್ತಿ ಭಂಡಾರಿ ಬಸವೇಶ್ವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಸಾರ್ಥಕತೆ ಬರಲಿದೆ ಎಂದು ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ ಬಣ್ಣಿಸಿದ್ದಾರೆ.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ಇವರ ಸಹಕಾರದಲ್ಲಿ ನಗರದ ಭಾರತೀಯ ವಿದ್ಯಾಭವನದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.
ಹನ್ನೆರಡನೇ ಶತಮಾನದಲ್ಲಿ ಜಾತಿ ನಿರ್ಮೂಲನೆಗೆ ಹಾಗೂ ಸ್ತಿçÃಯರಿಗೆ ಸಮಾನ ಅವಕಾಶ ನೀಡಲು ಬಸವೇಶ್ವರರು ಶ್ರಮಿಸಿದರು. ಇಂದಿನ ವೈಜ್ಞಾನಿಕ ಶರವೇಗದ ಬದುಕಿ ನಲ್ಲಿಯೂ ಜಾತಿ ನಿರ್ಮೂಲನೆಗೆ ಹಾಗೂ ಸ್ತಿçÃಯರಿಗೆ ಸಮಾನ ಅವಕಾಶ ಕಲ್ಪಿಸಲು ಹೋರಾಟಗಳು ನಡೆಯುತ್ತಿವೆ ಎಂದರು.
ಹಿಂದೆ ಶಿಕ್ಷಣದಲ್ಲಿ ಸಂಸ್ಕೃತ ಭಾಷೆಯನ್ನು ಬಳಸುತ್ತಿದ್ದರು, ಅಂತಹ ಸಂದರ್ಭದಲ್ಲಿ ಬಸವೇಶ್ವರರು ನಾಡಿನ ಭಾಷೆಯಾದ ಕನ್ನಡದಲ್ಲಿ ವಚನಗಳನ್ನು ರಚಿಸುವ ಮೂಲಕ ಎಲ್ಲರಿಗೂ ಅರ್ಥ ವಾಗುವಂತೆ ಮತ್ತು ಹತ್ತಿರವಾಗುವಂತೆ ಸಾಮಾಜಿಕ ಸಂದೇಶಗಳನ್ನು ನೀಡಿದ್ದರು ಎಂದು ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ ತಿಳಿಸಿದರು.
ಬಸವೇಶ್ವರರು ಅನೇಕ ವಚನಗಳ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸಿದರು, ಜಾತಿ-ಮತ-ಪಂಥ ಪದ್ಧತಿಯ ನಿರ್ಮೂಲನೆಗೆ ಶ್ರಮಿಸಿದರು. ಆ ನಿಟ್ಟಿನಲ್ಲಿ ಬಸವೇಶ್ವರರ ಆದರ್ಶಗಳು ಇಂದಿಗೂ ದಾರಿದೀಪ ವಾಗಿವೆ ಎಂದು ವರ್ಣಿಸಿದರು.
ನಿವೃತ್ತ ಪ್ರಾಧ್ಯಾಪಕರಾದ ಸಿ.ಎಂ.ಧರ್ಮಪ್ಪ ಅವರು ಮಾತನಾಡಿ ಬಸವೇಶ್ವರರು ಸಾಮಾಜಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಅಸಮಾನ್ಯ ವ್ಯಕ್ತಿತ್ವ ಹೊಂದಿದ್ದರು, ಸಮಾಜದ ಸುಧಾರಣೆ ಕ್ರಾಂತಿಕಾರಕ ಬದಲಾವಣೆಗೆ ಪ್ರಯತ್ನಿಸಿದರು.
ಅಜ್ಞಾನದ ಕಾಲದಲ್ಲಿ ಜ್ಯೋತಿ ಆಗಿ ಕಾಣಿಸಿಕೊಂಡ ಬಸವೇಶ್ವರರು, ಸ್ತಿçÃಯರಿಗೆ
(ಮೊದಲ ಪುಟದಿಂದ) ಸ್ವಾತಂತ್ರö್ಯ, ಸಮಾನತೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರö್ಯಕ್ಕೆ ಹೆಚ್ಚಿನ ಒತ್ತು ನೀಡಿದರು ಎಂದು ನುಡಿದರು.
ಜಿಲ್ಲಾಧಿಕಾರಿ ಡಾ .ಬಿ.ಸಿ. ಸತೀಶ ಮಾತನಾಡಿ ಕಾಯಕವೇ ಕೈಲಾಸ ಎಂಬAತೆ, ನುಡಿದಂತೆ ನಡೆಯಬೇಕು. ನಮ್ಮ ಕೆಲಸಗಳು ಮಾತನಾಡಬೇಕು ಎಂದು ಅವರು ಹೇಳಿದರು.
ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ಅಧ್ಯಕ್ಷ ಎಚ್.ವಿ. ಶಿವಪ್ಪ ಮಾತನಾಡಿ ಬಸವ ತತ್ವಗಳು ಇಂದಿಗೂ ಪ್ರಸ್ತುತವಾಗಿದ್ದು, ಶಾಲಾ ಪಠ್ಯದಲ್ಲಿ ವಚನಗಳನ್ನು ಸೇರ್ಪಡೆ ಮಾಡಬೇಕು;
ವಚನ ಸಾಹಿತ್ಯವನ್ನು ಮಕ್ಕಳು ಕಲಿಯುವಂತಾಗಬೇಕು. ವಚನ ಸಾಹಿತ್ಯದಿಂದ ಸಮಾಜದ ಬೆಳವಣಿಗೆಗೆ ಹಿಂದಿಗಿAತ ಇಂದು ಹೆಚ್ಚಿನ ಅವಶ್ಯಕ ಎಂಬುದನ್ನು ಅರಿತುಕೊಳ್ಳಬೇಕು ಎಂದು ನುಡಿದರು.
ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ಪ್ರಧಾನ ಕಾರ್ಯದರ್ಶಿ ಶಂಭು, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ತಹಶೀಲ್ದಾರ್ ಪಿ.ಎಸ್.ಮಹೇಶ್, ಪೌರಾಯುಕ್ತರಾದ ಎಸ್.ವಿ.ರಾಮದಾಸ್, ಸಮಾಜದ ಪ್ರಮುಖರು, ಇತರರು ಇದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಕೆ.ಟಿ. ದರ್ಶನ್ ಸ್ವಾಗತಿಸಿದರು, ಕುಮಾರ್ ನಿರೂಪಿಸಿದರು, ಶಂಕರಯ್ಯ ಪ್ರಾರ್ಥಿಸಿದರು, ಮಣಜೂರು ಮಂಜುನಾಥ್ ವಂದಿಸಿದರು.
ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಅವರು ನಗರದ ಮಹದೇವಪೇಟೆಯ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ವೀರಗಾಸೆ, ಗೊರವರ ಹಾಗೂ ಡೊಳ್ಳು ಕುಣಿತ ವಿವಿಧ ಜಾನಪದ ಕಲಾ ತಂಡದ ಕಲಾವಿದರು ಮೆರವಣಿಗೆಯಲ್ಲಿ ಗಮನ ಸೆಳೆದರು. ಹಲವು ಇಲಾಖೆ ಅಧಿಕಾರಿಗಳು ಇದ್ದರು.