ಮಡಿಕೇರಿ, ಮೇ ೨ : ಕೊಡಗು ಜಿಲ್ಲೆಯ ಕಾಫಿ ತೋಟಗಳ ಲೈನ್ಮನೆಗಳಲ್ಲಿ ವಾಸವಿರುವ ಮೊಗೇರ ಜನಾಂಗದ ಕೂಲಿ ಕಾರ್ಮಿಕರಿಗೆ ಸರಕಾರದಿಂದ ವಸತಿ ಸೌಲಭ್ಯ ಒದಗಿಸಬೇಕೆಂದು ಒತ್ತಾಯಿಸಿ ತಾ. ೬ ರಂದು ಪ್ರತಿಭಟನೆ ನಡೆಸಲಾಗುವುದೆಂದು ಮೊಗೇರ ಸಮಾಜದ ಜಿಲ್ಲಾಧ್ಯಕ್ಷ ಗೌತಮ್ ಶಿವಪ್ಪ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದರು.
ಜಿಲ್ಲೆಯಲ್ಲಿ ಸುಮಾರು ೨೦ ಸಾವಿರಕ್ಕಿಂತಲೂ ಹೆಚ್ಚು ಮೊಗೇರ ಸಮುದಾಯದವರು ವಾಸವಿದ್ದು, ಕಾಫಿ ತೋಟದ ಲೈನ್ ಮನೆಗಳಲ್ಲಿ ವಾಸಿಸುತ್ತಾ ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಸ್ವಂತ ಮನೆ ಇಲ್ಲದೆ ಸರಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಸಮಾಜದ ರಾಜ್ಯ ಸಮಿತಿ ಉಪಾಧ್ಯಕ್ಷ ಬಿ.ಶಿವಪ್ಪ ಮಾತನಾಡಿ, ಸರ್ಕಾರ ಪರಿಶಿಷ್ಟ ಜಾತಿ ವರ್ಗದವರಿಗೆ ಎಲ್ಲಾ ಕ್ಷೇತ್ರಗಳಲ್ಲಿ ಮೊದಲ ಆದ್ಯತೆ ಎಂದು ಹೇಳುತ್ತಿದೆ. ಆದರೆ ಉಳ್ಳವರು ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಕೊಂಡು ಬಡವರ ಸೌಲಭ್ಯಗಳನ್ನು ತಾವೇ ಪಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಜಿಲ್ಲಾಡಳಿತ ತಕ್ಷಣ ಸರಕಾರಿ ಜಾಗವನ್ನು ಗುರುತಿಸಿ ತೋಟದ ಲೈನ್ಮನೆಗಳಲ್ಲಿ ವಾಸವಿರುವ ಮೊಗೇರ ಸಮುದಾಯದ ಕಾರ್ಮಿಕರು ಹಾಗೂ ನಿರ್ಗತಿಕರಿಗೆ ವಸತಿ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿದ ಅವರು, ನಮ್ಮ ಹಕ್ಕನ್ನು ಎಂದು ಹೇಳುತ್ತಿದೆ. ಆದರೆ ಉಳ್ಳವರು ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಕೊಂಡು ಬಡವರ ಸೌಲಭ್ಯಗಳನ್ನು ತಾವೇ ಪಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಜಿಲ್ಲಾಡಳಿತ ತಕ್ಷಣ ಸರಕಾರಿ ಜಾಗವನ್ನು ಗುರುತಿಸಿ ತೋಟದ ಲೈನ್ಮನೆಗಳಲ್ಲಿ ವಾಸವಿರುವ ಮೊಗೇರ ಸಮುದಾಯದ ಕಾರ್ಮಿಕರು ಹಾಗೂ ನಿರ್ಗತಿಕರಿಗೆ ವಸತಿ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿದ ಅವರು, ನಮ್ಮ ಹಕ್ಕನ್ನು ಗಂಭೀರವಾಗಿ ಪರಿಗಣಿಸಿ ಸಮುದಾಯದ ಅಭಿವೃದ್ಧಿಗೆ ಸಹಕರಿಸಬೇಕೆಂದ ಅವರು, ಒತ್ತುವರಿಯಾಗಿರುವ ಸರಕಾರಿ ಭೂಮಿಯನ್ನು ಲೈನ್ ಮನೆಯಲ್ಲಿ ವಾಸಿಸುತ್ತಿರುವ ಕಾರ್ಮಿಕರಿಗೆ ಮತ್ತು ಉಳಿದ ನಿರ್ಗತಿಕರಿಗೆ ನೀಡಬೇಕು ಎಂದು ಒತ್ತಾಯಿಸಿದರು.
ಮುದ್ದ ಕುಲಲ ಯುವಕ ಸಂಘದ ಅಧ್ಯಕ್ಷ ಎಂ.ಕೆ.ಜ್ಯೋತಿ ಕುಮಾರ್ ಮಾತನಾಡಿ, ಪೈಸಾರಿ ಹಾಗೂ ಅಕ್ರಮ ಒತ್ತುವರಿ ಜಾಗವನ್ನು ಗುರುತಿಸಿ ಕಾರ್ಮಿಕ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ದೊರೆತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.