ಸೋಮವಾರಪೇಟೆ: ಇಲ್ಲಿನ ವೀರಶೈವ ಸಮಾಜದ ವತಿಯಿಂದ ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು ಆಚರಿಸಲಾಯಿತು. ಪಟ್ಟಣದ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಅಲಂಕೃತ ವಾಹನದಲ್ಲಿ ಬಸವಣ್ಣ ಅವರ ಭಾವಚಿತ್ರವನ್ನು ಅಳವಡಿಸಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು.

ಸೋಮವಾರಪೇಟೆ ವೀರಶೈವ ಸಮಾಜದ ಅಧ್ಯಕ್ಷ ಶಿವಕುಮಾರ್, ಕಾರ್ಯದರ್ಶಿ ಮೃತ್ಯುಂಜಯ, ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಜಿಲ್ಲಾಧ್ಯಕ್ಷ ಮಲ್ಲೇಶ್, ಮಹಿಳಾ ಘಟಕದ ಅಧ್ಯಕ್ಷೆ ಉಷಾರಾಣಿ, ತಾಲೂಕು ಘಟಕದ ಅಧ್ಯಕ್ಷ ಜಯರಾಜ್, ರಾಷ್ಟಿçÃಯ ಸಂಘಟನಾ ಕಾರ್ಯದರ್ಶಿ ಎಸ್. ಮಹೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು. ಇಲ್ಲಿನ ಬಸವೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.ವೀರಾಜಪೇಟೆ: ವೀರಾಜಪೇಟೆ ತಾಲೂಕು ಆಡಳಿತ ಹಾಗೂ ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಕಚೇರಿ ಸಭಾಂಗಣದಲ್ಲಿ ಬಸವ ಜಯಂತಿಯನ್ನು ಆಚರಿಸಲಾಯಿತು.

ತಹಶೀಲ್ದಾರ್ ಯೋಗಾನಂದ ಅವರು ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ, ಕ್ರಾಂತಿ ಯೋಗಿ ಭಕ್ತಿ ಯೋಗಿಯಾಗಿದ್ದ ಬಸವಣ್ಣ ಅವರನ್ನು ನಾವು ಸದಾ ಸ್ಮರಿಸುವ ಮೂಲಕ ಅವರು ನೀಡಿದ ಸಂದೇಶ ತತ್ವಗಳನ್ನು ಪಾಲಿಸಬೇಕು ಎಂದರು. ಈ ಸಮಾರಂಭದಲ್ಲಿ ಗ್ರೇಡ್ ೨ ತಹಶೀಲ್ದಾರ್ ಪ್ರದೀಪ್‌ಕುಮಾರ್, ಉಪ ತಹಶೀಲ್ದಾರ್ ಪೊನ್ನು, ಚುನಾವಣಾ ವಿಭಾಗದ ಅಧಿಕಾರಿ ಮಂಜುನಾಥ್, ಶಿಕ್ಷಕ ಎ.ವಿ. ಮಂಜುನಾಥ, ಗ್ರಾಮಲೆಕ್ಕಿಗ ಕೃಷ್ಣ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.ಪೊನ್ನಂಪೇಟೆ: ಕಾಯಕವೇ ಕೈಲಾಸ ಎಂಬ ವಿಶ್ವಗುರು ಬಸವಣ್ಣನವರ ನುಡಿಮುತ್ತನ್ನು ಅರ್ಥಪೂರ್ಣವಾಗಿಸುವ ಸಲುವಾಗಿ ಬಸವ ಜಯಂತಿಯ ದಿನವಾದ ಇಂದು ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಶ್ರಮದಾನದ ಮೂಲಕ ಸ್ವಚ್ಛತಾ ಅಭಿಯಾನವನ್ನು ನಡೆಸಿದರು.

ಪೊನ್ನಂಪೇಟೆಯ ಕುಂದಾ ರಸ್ತೆಯಲ್ಲಿರುವ ಅಯ್ಯಪ್ಪಸ್ವಾಮಿ ದೇವಸ್ಥಾನದಿಂದ ನಿನಾದ ಶಾಲೆಯವರೆಗೆ ಸುಮಾರು ಒಂದು ಕಿಲೋಮೀಟರ್‌ಗಿಂತಲೂ ಹೆಚ್ಚು ದೂರ ರಸ್ತೆಯ ಇಕ್ಕೆಲಗಳಲ್ಲಿ ಸಾರ್ವಜನಿಕರು ಎಸೆದಿದ್ದ ತ್ಯಾಜ್ಯಗಳನ್ನು ಹೆಕ್ಕಿ ಪೊನ್ನಂಪೇಟೆ ಗ್ರಾಮ ಪಂಚಾಯಿತಿಯ ಕಸ ಸಂಗ್ರಹಣೆ ವಾಹನಕ್ಕೆ ತುಂಬಿಸಿದರು. ಅರಣ್ಯ ಮಹಾವಿದ್ಯಾಲಯದ ಡೀನ್ ಡಾ. ಕುಶಾಲಪ್ಪ ಅವರ ಮಾರ್ಗದರ್ಶನದಲ್ಲಿ ಪ್ರಾಧ್ಯಾಪಕರಾದ ಡಾ. ಜಡೇಗೌಡ, ಎನ್.ಎಸ್.ಎಸ್. ಅಧಿಕಾರಿ ಮುಕ್ಕಾಟಿರ ಸುಬ್ರಮಣಿ, ದೈಹಿಕ ಶಿಕ್ಷಣ ನಿರ್ದೇಶಕ ಈಶ್ವರ್ ಅವರ ನೇತೃತ್ವದಲ್ಲಿ ಅರಣ್ಯ ಮಹಾವಿದ್ಯಾಲಯದ ೧೫೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ರಸ್ತೆಯ ಎರಡು ಬದಿ ಬಿದ್ದಿದ್ದ ಮದ್ಯದ ಬಾಟಲಿಗಳು, ಪ್ಲಾಸ್ಟಿಕ್‌ಗಳು, ಇನ್ನಿತರ ತ್ಯಾಜ್ಯಗಳ ರಾಶಿಯನ್ನು ಹೆಕ್ಕಿ ಸ್ವಚ್ಛ ಮಾಡಿದರು. ವಿದ್ಯಾರ್ಥಿಗಳಾದ ರೇವಣ್ಣ ಹಾಗೂ ಮೋನಿಷ ಮಾತನಾಡಿ, ಸಾರ್ವಜನಿಕರಲ್ಲಿ ಸ್ವಚ್ಛ ಭಾರತದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ನಾವು ಇಂದು ಒಂದು ದಿನ ಸ್ವಚ್ಛ ಮಾಡಿದ ಮಾತ್ರಕ್ಕೆ ಪರಿಸರ ಸ್ವಚ್ಛವಾಗಿಬಿಡುವುದಿಲ್ಲ. ಸಾರ್ವಜನಿಕರು ಎಲ್ಲೆಂದರಲ್ಲಿ ತ್ಯಾಜ್ಯಗಳನ್ನು ಪದೇ ಪದೇ ಎಸೆಯುವುದರಿಂದ ನಮ್ಮ ಶ್ರಮ ವ್ಯರ್ಥವಾಗುತ್ತಿದೆ. ಎಲ್ಲೆಂದರಲ್ಲಿ ತ್ಯಾಜ್ಯಗಳನ್ನು ಎಸೆಯದೆ ಸ್ವಚ್ಛತಾ ಕಾರ್ಯದಲ್ಲಿ ನಮ್ಮೊಂದಿಗೆ ಕೈಜೋಡಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.ಸೋಮವಾರಪೇಟೆ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನಿವೃತ್ತ ನೌಕರರ ಸಂಘದ ವತಿಯಿಂದ ಸಮಾನತೆಯ ಕ್ರಾಂತಿ ಪುರುಷ ಬಸವಣ್ಣನವರ ೮೮೯ನೇ ಜಯಂತಿಯನ್ನು ಪತ್ರಿಕಾ ಭವನದಲ್ಲಿ ಆಚರಿಸಲಾಯಿತು.

ನಗರ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್. ಮಹೇಶ್ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿ, ೧೨ನೇ ಶತಮಾನದಲ್ಲೇ ಸಮಾನತೆಗಾಗಿ, ಮೂಢನಂಬಿಕೆಯ ವಿರುದ್ಧ ಕ್ರಾಂತಿಕಾರಿ ಬಸವಣ್ಣ ಹೋರಾಟ ಮಾಡಿದ್ದರು. ಆದರೆ ಇಂದಿಗೂ ಜಾತಿ ವ್ಯವಸ್ಥೆ, ಮೂಢನಂಬಿಕೆ ಸಮಾಜದಲ್ಲಿ ಬೇರೂರಿರುವುದು ದುರಂತ ಎಂದರು. ಮುಖ್ಯ ಭಾಷಣಕಾರರಾಗಿ ಭಾಗವಹಿಸಿದ್ದ ಎನ್. ವೆಂಕಟರಮಣ ಮಾತನಾಡಿ, ಸಮಾನತೆಯ ಸಮಾಜಕ್ಕೆ ಹೋರಾಟ ಮಾಡಿದ ಕ್ರಾಂತಿಕಾರಿ, ಪ್ರಜಾಪ್ರಭುತ್ವವಾದಿ ಬಸವಣ್ಣನವರ ಆದರ್ಶಗಳು ಸಾರ್ವಕಾಲಿಕ ಎಂದರು. ಕಾರ್ಯಕ್ರಮದಲ್ಲಿ ಸಂಘದ ಜಿಲ್ಲಾಧ್ಯಕ್ಷ ಸಿದ್ದಪ್ಪ, ನಿವೃತ್ತ ನೌಕರರ ಸಂಘದ ಸೋಮವಾರಪೇಟೆ ತಾಲೂಕು ಅಧ್ಯಕ್ಷ ಸಿ.ಕೆ. ಮಲ್ಲಪ್ಪ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಮಾಜಿ ಅಧ್ಯಕ್ಷ ಜವರಪ್ಪ, ಸಂಘದ ನಿರ್ದೇಶಕ ಜಯಪ್ಪ ಹಾನಗಲ್ ಇದ್ದರು.