ಮಡಿಕೇರಿ, ಮೇ ೫: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೈಸೂರು ವಿಭಾಗ, ಕೊಡಗು ಜಿಲ್ಲೆ ಮಡಿಕೇರಿ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಶಂಕರಾಚಾರ್ಯರ ರಾಜ್ಯ ಮಟ್ಟದ ಜಯಂತಿಯು ತಾ. ೬ ರಂದು (ಇಂದು) ಬೆಳಗ್ಗೆ ೧೧ ಗಂಟೆಗೆ ನಗರದ ಶ್ರೀ ಲಕ್ಷಿö್ಮನರಸಿಂಹ ಕಲ್ಯಾಣ ಮಂಟಪದ ಶತಮಾನ ಭವನದಲ್ಲಿ ನಡೆಯಲಿದೆ.

ಮೆರವಣಿಗೆಯು ನಗರದ ಗಾಂಧಿ ಮೈದಾನದಿಂದ ಬೆಳಗ್ಗೆ ೯ ಗಂಟೆಗೆ ಶ್ರೀ ಶಂಕರಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ವಿವಿಧ ಜಾನಪದ ಕಲಾ ತಂಡಗಳೊAದಿಗೆ ಪ್ರಾರಂಭವಾಗಿ ಜನರಲ್ ತಿಮ್ಮಯ್ಯ ವೃತ್ತ, ಮಂಗೇರಿರ ಮುತ್ತಣ್ಣ ವೃತ್ತ, ಸ್ಕಾ÷್ವಡ್ರನ್ ಲೀಡರ್ ದೇವಯ್ಯ ವೃತ್ತ, ಗುಡ್ಡೆಮನೆ ಅಪ್ಪಯ್ಯಗೌಡ ರಸ್ತೆ, ಓಂಕಾರೇಶ್ವರ ದೇವಾಲಯದ ಮಾರ್ಗವಾಗಿ ಶ್ರೀ ಲಕ್ಷಿö್ಮ್ರÃನರಸಿಂಹ ಕಲ್ಯಾಣ ಮಂಟಪಕ್ಕೆ ತಲುಪಲಿದೆ.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಕೆ.ಜಿ.ಬೋಪಯ್ಯ, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ರವಿಕುಶಾಲಪ್ಪ, ಸಂಸದ ಪ್ರತಾಪ್‌ಸಿಂಹ, ಶಾಸಕರಾದ ವೀಣಾ ಅಚ್ಚಯ್ಯ, ಸುಜಾ ಕುಶಾಲಪ್ಪ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಮೇಶ್ ಹೊಳ್ಳ, ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಅಧ್ಯಕ್ಷ ಗೋಪಾಲಕೃಷ್ಣ, ಪುತ್ತೂರು ಅಂಬಿಕಾ ಪದವಿ ವಿದ್ಯಾಲಯದ ಪ್ರಾಚಾರ್ಯ ಡಾ. ವಿನಾಯಕ ಭಟ್ ಗಾಳಿಮನೆ, ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ. ಅಯ್ಯಪ್ಪ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಮತ್ತಿತರರು ಪಾಲ್ಗೊಳ್ಳಲಿದ್ದಾರೆ.