ಪಿಎಸ್ಐ ನೇಮಕಾತಿ ಅಕ್ರಮ: ಡಿವೈಎಸ್ಪಿ-ಸಿಪಿಐ ಬಂಧನ
ಕಲಬುರಗಿ, ಮೇ ೫: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಸಿಐಡಿ, ರಾಯಚೂರು ಜಿಲ್ಲೆಯ ಲಿಂಗಸೂಗೂರು ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ಹಾಗೂ ಕಲಬುರಗಿ ಬೆರಳಚ್ಚು ವಿಭಾಗದ ಸಿಪಿಐ ಆನಂದ್ ಮೈತ್ರೆ ಅವರನ್ನು ಗುರುವಾರ ಬಂಧಿಸಿದೆ. ಪ್ರಕರಣಕ್ಕೆ ಸಂಬAಧಿಸಿದAತೆ ಈ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ನಿನ್ನೆಯಿಂದ ಸುಮಾರು ೧೦ ಗಂಟೆಗಳ ಸುದೀರ್ಘ ವಿಚಾರಣೆ ನಡೆಸಿದ ಸಿಐಡಿ ತಂಡ, ಇಂದು ಇಬ್ಬರೂ ಪೊಲೀಸ್ ಅಧಿಕಾರಿಗಳನ್ನು ಬಂಧಿಸಿದೆ. ವೈದ್ಯಕೀಯ ತಪಾಸಣೆ ನಂತರ ಆರೋಪಿ ಅಧಿಕಾರಿಗಳನ್ನು ಸಿಐಡಿ ಪೊಲೀಸರು ೩ನೇ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಮಲ್ಲಿಕಾರ್ಜುನ ಸಾಲಿ ಮತ್ತು ಆನಂದ್ ಮೈತ್ರೆ ಇಬ್ಬರನ್ನೂ ೮ ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ೩ನೇ ಜೆಎಂಎಫ್ಸಿ ನ್ಯಾಯಾಲಯದ ಸರ್ಕಾರಿ ವಕೀಲ ಶಿವಶರಣಪ್ಪ ಅವರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬAಧಿಸಿದAತೆ ಸಿಐಡಿ ತಂಡ, ಡಿವೈಎಸ್ಪಿ ರ್ಯಾಂಕ್ ಅಧಿಕಾರಿಯನ್ನು ಬಂಧಿಸಿರುವುದು ಇದೇ ಮೊದಲು. ಈಗಾಗಲೇ ೭ ದಿನಗಳಿಂದ ಸಿಐಡಿ ಕಸ್ಟಡಿಯಲ್ಲಿರುವ ಹಗರಣದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ್ಗೆ ಸಹಾಯ ಮಾಡಿದ ಆರೋಪದ ಮೇಲೆ ಸಾಲಿ ಅವರನ್ನು ಬಂಧಿಸಲಾಗಿದೆ. ಆರ್.ಡಿ. ಪಾಟೀಲ್ ಅವರು ಬ್ಲೂಟೂತ್ ಸಾಧನವನ್ನು ಬಳಸಿಕೊಂಡು ಅಭ್ಯರ್ಥಿಗಳಿಗೆ ಪಿಎಸ್ಐ ಪರೀಕ್ಷೆ ಬರೆಯಲು ಸಹಾಯ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಸಾಲಿ ಮತ್ತು ಮೈತ್ರೆ ಬಂಧನದೊAದಿಗೆ ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬAಧಿಸಿದAತೆ ಸಿಐಡಿಯಿಂದ ಬಂಧಿತರ ಸಂಖ್ಯೆ ೩೧ ಕ್ಕೆ ಏರಿಕೆಯಾಗಿದೆ.
ಚೋಟಾ ಪಾಕಿಸ್ತಾನ ವೀಡಿಯೋ : ಕ್ರಮ ಕೈಗೊಳ್ಳುವಂತೆ ಎಸ್ಪಿಗೆ ಸಿಎಂ ಸೂಚನೆ
ಮೈಸೂರು, ಮೇ ೫: ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕವಲಂದೆಯನ್ನು ಚೋಟಾ ಪಾಕಿಸ್ತಾನ ಎಂದು ಬಣ್ಣಿಸಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ. ಕಳೆದ ಮಂಗಳವಾರ ರಂಜಾನ್ ಹಬ್ಬದಂದು ಸಾಮೂಹಿಕ ಪ್ರಾರ್ಥನೆ ಮುಗಿಸಿ ಹೊರ ಬರುವ ವೇಳೆ ಕವಲಂದೆ ಬೋಲೇ ತೋ ಚೋಟಾ ಪಾಕಿಸ್ತಾನ್ ಠೀಕ್ ಹೈ ಎಂಬ ಆಡಿಯೋ ಹೊಂದಿರುವ ವೀಡಿಯೋ ರೆಕಾರ್ಡ್ವೊಂದು ಇದೀಗ ವೈರಲ್ ಆಗಿದೆ. ಈ ವೀಡಿಯೋದಲ್ಲಿ ಸಾಮೂಹಿಕ ಪ್ರಾರ್ಥನೆ ಬಳಿಕ ಮುಸ್ಲಿಂ ಬಾಂಧವರ ಎಲ್ಲರೂ ಒಂದೆಡೆ ಸೇರಿದ್ದರು. ಎಲ್ಲರೂ ರಸ್ತೆ ಬದಿಯಲ್ಲಿ ನಿಂತಿದ್ದು, ಅವರು "ನಾರಾ ಇ ತಕ್ಬೀರ್ ಅಲ್ಲಾಹು ಅಕ್ಬರ್" ಎಂದು ಕೂಗುವುದನ್ನು ಕೇಳಬಹುದು. ಈ ವೇಳೆ ವ್ಯಕ್ತಿಯೊಬ್ಬ ವೀಡಿಯೋ ಮಾಡಿದ್ದು, ದೃಶ್ಯ ಸೆರೆ ಹಿಡಿಯುವಾಗ ಆ ವ್ಯಕ್ತಿ ಕೌಲಂದೆ ಗ್ರಾಮ ಚೋಟಾ ಪಾಕಿಸ್ತಾನ ಎಂದು ಹೇಳಿದ್ದಾರೆ. ಈ ವೀಡಿಯೋ ಈಗ ವೈರಲ್ ಆಗಿದೆ. ಇಂದು ಈ ವೀಡಿಯೋ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಮೈಸೂರು ಎಸ್ಪಿಗೆ ಸೂಚಿಸುತ್ತೇನೆ ಎಂದು ಬೊಮ್ಮಾಯಿ ವರದಿಗಾರರಿಗೆ ತಿಳಿಸಿದ್ದಾರೆ.
ಬಯಸಿದವರಿಗೆ ಮಾತ್ರ ಸಬ್ಸಿಡಿ: ಅರವಿಂದ ಕೇಜ್ರಿವಾಲ್
ನವದೆಹಲಿ, ಮೇ ೫: ರಾಷ್ಟç ರಾಜಧಾನಿ ದೆಹಲಿಯಲ್ಲಿ ಬಯಸಿದವರಿಗೆ ಮಾತ್ರವೇ ಇನ್ಮುಂದೆ ವಿದ್ಯುತ್ ಸಬ್ಸಿಡಿ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಗುರುವಾರ ಘೋಷಿಸಿದ್ದಾರೆ. ಉಚಿತ ಹಾಗೂ ವಿದ್ಯುತ್ ಸಬ್ಸಿಡಿ ಘೋಷಣೆ ದೆಹಲಿ ಸರ್ಕಾರದ ದೊಡ್ಡ ಜನಪ್ರಿಯ ಯೋಜನೆಯಾಗಿದೆ. ಆದರೆ ಈ ಬಗ್ಗೆ ರಾಜಕೀಯ ವಿರೋಧಿಗಳಿಂದ ತೀವ್ರ ಟೀಕೆಗೆ ಗುರಿಯಾಗಿರುವ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ಐಚ್ಛಿಕಗೊಳಿಸಲಾಗುವುದು. ಉಚಿತ ಅಥವಾ ಸಬ್ಸಿಡಿ ವಿದ್ಯುತ್ ಅನ್ನು ಕೇಳುವವರಿಗೆ ಮಾತ್ರ ನೀಡಲಾಗುವುದು. ಅಕ್ಟೋಬರ್ ೧ ರಿಂದ ಈ ಹೊಸ ನಿಯಮ ಜಾರಿಗೆ ಬರಲಿದೆ ಎಂದು ದೆಹಲಿ ಮುಖ್ಯಮಂತ್ರಿ ಹೇಳಿದ್ದಾರೆ. ಯಾರಾದರೂ ತನ್ನನ್ನು ತಾನು ಸಮರ್ಥನೆಂದು ಪರಿಗಣಿಸಿದರೆ, ತನಗೆ ವಿದ್ಯುತ್ ಸಬ್ಸಿಡಿ ಬೇಡ ಮತ್ತು ಸಾಮಾನ್ಯ ದರದ ವಿದ್ಯುತ್ ಬಳಸಬಹುದೆಂದು ದೆಹಲಿ ಸರ್ಕಾರಕ್ಕೆ ಹೇಳಬಹುದು. ಈ ಬಗ್ಗೆ ಜನರನ್ನು ಕೇಳುವ ಕೆಲಸ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದಿದ್ದಾರೆ. ಪ್ರಸ್ತುತ ದೆಹಲಿ ಸರ್ಕಾರ ಗ್ರಾಹಕರಿಗೆ ೨೦೦ ಯೂನಿಟ್ ವಿದ್ಯುತ್ ಉಚಿತವಾಗಿ ನೀಡುತ್ತಿದೆ. ತಿಂಗಳಿಗೆ ೨೦೧ ರಿಂದ ೪೦೦ ಯೂನಿಟ್ ವಿದ್ಯುತ್ ಬಳಸುವವರಿಗೆ ೮೦೦ ರೂ. ಸಬ್ಸಿಡಿ ನೀಡಲಾಗುತ್ತಿದೆ. ಕೇಜ್ರಿವಾಲ್ ಅವರ ಉಚಿತ ವಿದ್ಯುತ್ ಮತ್ತು ನೀರಿನ ಯೋಜನೆಯು ದೆಹಲಿಯಲ್ಲಿ ಅವರ ಬೃಹತ್ ಗೆಲುವಿಗೆ ಪ್ರಮುಖ ಕಾರಣವೆಂದು ಪರಿಗಣಿಸಲಾಗಿದೆ. ಕಳೆದ ಕೆಲ ವಾರಗಳಿಂದ ಕಲ್ಲಿದ್ದಲು ಕೊರತೆಯುಂಟಾಗಿ ವಿದ್ಯುತ್ ಬಿಕ್ಕಟ್ಟು ಎದುರಾಗಿದ್ದು, ಕೇಜ್ರಿವಾಲ್ ಸರ್ಕಾರದ ಉಚಿತ ವಿದ್ಯುತ್ ಯೋಜನೆ ತೀವ್ರ ಟೀಕೆಗೆ ಗುರಿಯಾಗಿತ್ತು. ಈ ಹಿನ್ನೆಲೆಯಲ್ಲಿ ದೆಹಲಿ ಸಿಎಂ ಅಕ್ಟೋಬರ್ ೧ ರಿಂದ ಉಚಿತ ವಿದ್ಯುತ್ ಮತ್ತು ವಿದ್ಯುತ್ ಸಬ್ಬಿಡಿ ಪಡೆಯುವುದನ್ನ ಜನರ ನಿರ್ಧಾರಕ್ಕೆ ಬಿಡಲಿದ್ದಾರೆ.
ಜೋಧ್ಪುರ ಕೋಮು ಸಂಘರ್ಷ: ೨೧೧ ಮಂದಿ ಬಂಧನ
ಜೈಪುರ, ಮೇ ೫: ಈದ್ಗೂ ಮುನ್ನ ಜೋಧ್ಪುರದಲ್ಲಿ ನಡೆದ ಕೋಮು ಸಂಘರ್ಷಕ್ಕೆ ಸಂಬAಧಿಸಿದAತೆ ಇಲ್ಲಿಯವರೆಗೂ ೨೧೧ ಜನರನ್ನು ಬಂಧಿಸಲಾಗಿದೆ. ನಗರದಲ್ಲಿ ಪರಿಸ್ಥಿತಿ ಇದೀಗ ನಿಯಂತ್ರಣದಲ್ಲಿದೆ ಎಂದು ಪೊಲೀಸರು ಗುರುವಾರ ಹೇಳಿದ್ದಾರೆ. ಮೂರನೇ ದಿನವಾದ ಗುರುವಾರ ಕೂಡಾ ಹಿಂಸಾಚಾರ ಮುಂದುವರೆದಿದ್ದರಿAದ ನಗರದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ. ಜನರು ಶಾಂತಿ ಕಾಪಾಡುವಂತೆ, ವದಂತಿಗಳಿಗೆ ಕಿವಿಗೂಡದಂತೆ. ಸುಳ್ಳು ವದಂತಿ ಹರಡುವವರ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.