ಸೋಮವಾರಪೇಟೆ, ಮೇ ೪: ಇಂದು ಮಧ್ಯಾಹ್ನ ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮೀಣ ಭಾಗದಲ್ಲಿ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿತು. ಮಳೆಯೊಂದಿಗೆ ಗಾಳಿಯೂ ಬೀಸಿದ ಹಿನ್ನೆಲೆ ಮರಗಳು ನೆಲಕ್ಕುರುಳಿದ್ದು, ಕೆಲಕಾಲ ವಿದ್ಯುತ್ ಸ್ಥಗಿತಗೊಂಡಿತ್ತು.
ಪಟ್ಟಣ ಸಮೀಪದ ಮಸಗೋಡು ಗ್ರಾಮದ ಮುಖ್ಯರಸ್ತೆಯಲ್ಲಿ ಭಾರೀ ಗಾಳಿ ಮಳೆಗೆ ಮರವೊಂದು ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದ ಪರಿಣಾಮ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಮುಖ್ಯರಸ್ತೆಗೆ ಅಡ್ಡಲಾಗಿ ಮರ ಬಿದ್ದಿದ್ದರಿಂದ ಸೋಮವಾರಪೇಟೆ-ಕೊಣನೂರು ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಹನಗಳು ಕೆಲಕಾಲ ಸ್ಥಗಿತಗೊಂಡಿದ್ದವು. ಸ್ಥಳೀಯರು ಮರವನ್ನು ತೆರವುಗೊಳಿಸಿದ ನಂತರ ಸಂಚಾರ ಸುಗಮಗೊಂಡಿತು.