ನಾಪೋಕ್ಲು, ಮೇ ೪: ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಬಾಲ್ಯದಿಂದಲೇ ಪ್ರಯತ್ನಿಸಿದರೆ ಮುಂದಿನ ಗುರಿಯನ್ನು ತಲುಪಲು ಸಾಧ್ಯ ಎಂದು ನಿವೃತ್ತ ನಬಾರ್ಡ್ ವ್ಯವಸ್ಥಾಪಕ ಮುಂಡAಡ ನಾಣಯ್ಯ ಹೇಳಿದರು. ಕೊಡವ ಸಮಾಜದಲ್ಲಿ ನಡೆದ ಅಂಕುರ್ ಪಬ್ಲಿಕ್ ಶಾಲೆಯ ಗ್ರಾö್ಯಜ್ಯುಯೇಶನ್ ಡೇ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಕೇಟೋಳಿರ ರಾಜಾಚರ್ಮಣ ಸಭೆಯ ಅಧ್ಯಕ್ಷತೆ ವಹಿಸಿದ್ದರು. ನಿರ್ದೇಶಕ ಕರುಂಬಯ್ಯ ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ರತ್ನಚರ್ಮಣ, ಶಿಕ್ಷಕ ವೃಂದ, ಮಕ್ಕಳು ಹಾಗೂ ಪೋಷಕರು ಹಾಜರಿದ್ದರು. ಈ ಸಂದರ್ಭ ಹತ್ತನೇ ತರಗತಿ ವ್ಯಾಸಂಗ ಪೂರೈಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಪ್ರದಾನ ಮಾಡಲಾಯಿತು.