ಮಡಿಕೇರಿ, ಮೇ ೫: ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಸುಮಾರು ೬,೨೦೨ ವಿದ್ಯುತ್ ಪರಿವರ್ತಕಗಳಲ್ಲಿ ೧,೫೦೦ ಸಂಖ್ಯೆಯ ಪರಿವರ್ತಕಗಳನ್ನು ಇಂಧನ ಸಚಿವರ ನಿರ್ದೇಶನದಂತೆ ತಾ. ೫ ರಿಂದ ೧೫ ರವರೆಗೆ ಟ್ರಾನ್ಸ್ಫಾರ್ಮರ್ ನಿರ್ವಹಣಾ ಅಭಿಯಾನ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ.
ಈ ಸಂದರ್ಭ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅಶೋಕ್ ಕೋರಿದ್ದಾರೆ.