ಗುಡ್ಡೆಹೊಸೂರು, ಮೇ ೫: ಇಲ್ಲಿಗೆ ಸಮೀಪದ ಮಾದಪಟ್ಟಣ ಗ್ರಾಮದಲ್ಲಿ ಜೀರ್ಣೋದ್ಧಾರಗೊಂಡ ಶ್ರೀ ಕಾಶಿ ವಿಶ್ವನಾಥ ಮತ್ತು ಶ್ರೀ ಜೋಡಿ ಬಸವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸ್ಥಿರಬಿಂಬ ಪ್ರತಿಷ್ಠಾಪನಾ ಕಾರ್ಯಕ್ರಮ ಮತ್ತು ಕುಂಬಾಭಿಷೇಕ ಸಮಾರಂಭ ತಾ. ೬ ರಂದು (ಇಂದು) ನಡೆಯಲಿದೆ.
ಎರಡು ದಿನಗಳಿಂದ ದೇವಸ್ಥಾನದಲ್ಲಿ ವಿವಿಧ ಹೋಮಹವನ ನಡೆಯಲಿವೆ. ಈ ಕಾರ್ಯಕ್ರಮದಲ್ಲಿ ವಿವಿಧ ಮಠಗಳ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ. ಶುಕ್ರವಾರ ಮಧ್ಯಾಹ್ನ ೧೨ ಗಂಟೆಗೆ ದೇವಸ್ಥಾನ ಸಮಿತಿ ಅಧ್ಯಕ್ಷ ಎಂ.ಎಸ್. ನಾಗೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಅವರು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕ ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಸಂಸದ ಪ್ರತಾಪ್ ಸಿಂಹ, ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆಯ ಅಧ್ಯಕ್ಷ ರವಿ ಕುಶಾಲಪ್ಪ, ವಿಧಾನ ಪರಿಷತ್ ಸದಸ್ಯರುಗಳಾದ ಸುಜಾ ಕುಶಾಲಪ್ಪ, ಶಾಂತೆಯAಡ ವೀಣಾ ಅಚ್ಚಯ್ಯ, ಜಿಲ್ಲಾಧಿಕಾರಿ ಬಿ.ಸಿ. ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ. ಅಯ್ಯಪ್ಪ, ತಹಶೀಲ್ದಾರ್ ಪ್ರಕಾಶ್, ಮಾಜಿ ಅರಣ್ಯ ಸಚಿವ ಬಿ.ಎ. ಜೀವಿಜಯ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ ಮತ್ತು ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಂದಿನಿ ಮುಂತಾದವರು ಭಾಗವಹಿಸಲಿದ್ದಾರೆ.