*ಗೋಣಿಕೊಪ್ಪ, ಮೇ ೬: ಮಕ್ಕಳಲ್ಲಿನ ಸೃಜನಶೀಲತೆಯನ್ನು ಬೆಳೆಸಲು ಶಿಕ್ಷಕರು ಮುಂದಾಗುವುದರ ಜೊತೆಗೆ ಮಕ್ಕಳ ಯೋಚನೆಗಳಿಗೆ ಪೂರಕವಾಗಿ ಸ್ಪಂದಿಸುವ ಮನಸ್ಥಿತಿ ಯನ್ನು ಬೆಳೆಸಿಕೊಳ್ಳಬೇಕೆಂದು ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಎನ್.ಎಸ್. ಪ್ರಶಾಂತ್ ಅವರು ತಿಳಿಸಿದರು.
ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಬಾಲ ಭವನ ಪೊನ್ನಂಪೇಟೆ ಪ್ರಾಥಮಿಕ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ ೮ ದಿನಗಳು ಉಚಿತವಾಗಿ ನಡೆಯಲಿ ರುವ ಮಕ್ಕಳ ಬೇಸಿಗೆ ಶಿಬಿರಕ್ಕೆ ಮಕ್ಕಳಿಗೆ ಗುಲಾಬಿ ಹೂಗುಚ್ಚಗಳನ್ನು ನೀಡುವ ಮೂಲಕ ಮಕ್ಕಳನ್ನು ಸ್ವಾಗತಿಸಿ ಮಾತನಾಡಿದರು.
ಮಕ್ಕಳಲ್ಲಿ ವಿಭಿನ್ನ ಆಸಕ್ತಿಗಳು ಅಡಗಿರುತ್ತವೆ. ಅಂತಹ ಹವ್ಯಾಸಗಳನ್ನು ಹೊರತೆಗೆದು ಆ ದಾರಿಯಲ್ಲಿನ ಸಾಧನೆಗೆ ಮಕ್ಕಳನ್ನು ಕರೆದೊಯ್ಯುವ ಕಾರ್ಯವನ್ನು ಶಿಕ್ಷಕರು ನಡೆಸಬೇಕಾಗಿದೆ. ಉತ್ತಮ ದೇಶ ನಿರ್ಮಾಣಕ್ಕೆ ಮಕ್ಕಳನ್ನು ಗುಣವಂತರನ್ನಾಗಿ ಮಾಡುವ ಶಿಕ್ಷಕರ ಸೇವೆ ಶ್ಲಾಘನೀಯವಾಗಿದೆ. ಒಬ್ಬ ವಿದ್ಯಾರ್ಥಿಯ ಮೇಲೆ ಶಿಕ್ಷಕ ದೃಢ ಮನಸ್ಸಿನಲ್ಲಿ ಕೇಂದ್ರೀಕರಿಸಿ ಆತನ ಭವಿಷ್ಯವನ್ನು ರೂಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಶಿಕ್ಷಕನು ಮಕ್ಕಳ ಸೃಜನಶೀಲ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕೆಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲಾ ಬಿಳಗಿ ಮಾತನಾಡಿ, ಒಂದೇ ಬಾರಿಗೆ ಎಲ್ಲವನ್ನು ಕಲಿಯಬೇಕೆಂಬ ಭಾರವನ್ನು ಮಕ್ಕಳ ಮೇಲೆ ಹೆರದೇ ಅವರ ಹವ್ಯಾಸಗಳಿಗೆ ಮುಕ್ತ ಸ್ವಾತಂತ್ರö್ಯವನ್ನು ನೀಡಬೇಕಾಗಿದೆ. ಮಕ್ಕಳ ಹವ್ಯಾಸ ಚಟುವಟಿಕೆಗಳನ್ನು ಗಮನಿಸಿ ಪ್ರೋತ್ಸಾಹಿಸಬೇಕಾಗಿದೆ. ಹೆಚ್ಚು ಕ್ರೀಡೆ, ಸಂಸ್ಕöÈತಿ ಇನ್ನಿತರ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಮಕ್ಕಳು ತಮ್ಮ ಮನಸ್ಸನ್ನು ಕೇಂದ್ರೀಕರಿಸಿ ಕೊಳ್ಳುವ ವಾತಾವರಣವನ್ನು ಕಲ್ಪಿಸಬೇಕಾಗಿದೆ. ಅತಿ ಹೆಚ್ಚು ಸಮಯವನ್ನು ಪೋಷಕರು ಮಕ್ಕಳೊಂದಿಗೆ ಕಳೆಯುವ ಮೂಲಕ ಮಕ್ಕಳ ಭಾವನೆಗಳನ್ನು ಅರಿತುಕೊಳ್ಳಬೇಕಾಗಿದೆ ಎಂದು ಹೇಳಿದರು.
ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕ ಅವರ ಉಪಸ್ಥಿತಿಯೊಂದಿಗೆ ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಿರಿಜಾ ವೆಂಕಟೇಶ್, ಅಭಿವೃದ್ಧಿ ಅಧಿಕಾರಿ ಪುಟ್ಟರಾಜು, ತಾಲೂಕು ಸಂಪನ್ಮೂಲ ಸಮನ್ವಯ ಅಧಿಕಾರಿ ವನಜಾಕ್ಷಿ, ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯೋಪಾಧ್ಯಾಯ ವಿಜಯ್, ತಾಲೂಕು ಅಂಗನವಾಡಿ ಕಾರ್ಯಕರ್ತರ ಸಂಘದ ಅಧ್ಯಕ್ಷೆ ಸುಮಿತ್ರ, ಗ್ರಾಮ ಪಂಚಾಯಿತಿ ಸದಸ್ಯ ರಾಮಕೃಷ್ಣ, ಪೊನ್ನಂಪೇಟೆ ಕ್ಲಸ್ಟರ್‌ನ ಸಿ.ಆರ್.ಪಿ. ತಿರುನೆಲ್ಲಿಮಾಡ ಜೀವನ್ ಇದ್ದರು.