ಮಡಿಕೇರಿ, ಮೇ ೬: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಸಹಯೋಗದಲ್ಲಿ ನಡೆದ ಶಂಕರಾಚಾರ್ಯ ಜಯಂತಿ ಅಂಗವಾಗಿ ನಗರದಲ್ಲಿ ರಥಯಾತ್ರೆ ಜರುಗಿತು. ಅಲಂಕೃತ ರಥದಲ್ಲಿ ಶಂಕರಾಚಾರ್ಯರ ಭಾವಚಿತ್ರ ಹೊತ್ತ ಮೆರವಣಿಗೆ ನಗರದ ಮುಖ್ಯಬೀದಿಗಳಲ್ಲಿ ಸಾಗಿತು. ರಥಯಾತ್ರೆಗೆ ಶಾಸಕ ಕೆ.ಜಿ.ಬೋಪಯ್ಯ ಹಾಗೂ ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾಕುಶಾಲಪ್ಪ ಚಾಲನೆ ನೀಡಿ ಮೆರವಣಿಗೆಯಲ್ಲಿ ಪಾಲ್ಗೊಂಡರು. ಪೂಜಾ ಕುಣಿತ, ಗೊರವ ಕುಣಿತ, ಕಂಸಾಳೆ, ಡೊಳ್ಳು ಕುಣಿತ, ನಾದಸ್ವರ ಮೆರವಣಿಗೆಗೆ ಆಕರ್ಷಣೆಯನ್ನು ಹೆಚ್ಚಿಸಿತು.

(ಮೊದಲ ಪುಟದಿಂದ) ಗಾಂಧಿ ಮೈದಾನದಿಂದ ಹೊರಟ ರಥಯಾತ್ರೆ ಜನರಲ್ ತಿಮ್ಮಯ್ಯ ವೃತ್ತಕ್ಕೆ ತೆರಳಿ ಅಲ್ಲಿಂದ ಅಜ್ಜಮಾಡ ದೇವಯ್ಯ ವೃತ್ತದಿಂದ ಜೂನಿಯರ್ ಕಾಲೇಜು ರಸ್ತೆಗಾಗಿ ಲಕ್ಷಿö್ಮÃ ನರಸಿಂಹ ಕಲ್ಯಾಣ ಮಂಟಪದ ವರೆಗೆÀ ಸಾಗಿತು.

ಮೆರವಣಿಗೆಯಲ್ಲಿ ನಗರಸಭಾಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಮೇಶ್ ಹೊಳ್ಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೆಂಕಟೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ, ಬಿ.ಜೆ.ಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ಅಧ್ಯಕ್ಷ ಗೋಪಾಲಕೃಷ್ಣ, ಶಕ್ತಿ ದಿನಪತ್ರಿಕೆಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ, ಸಲಹಾ ಸಂಪಾದಕ ಬಿ.ಜಿ ಅನಂತಶಯನ, ಸಂಪತ್ ಕುಮಾರ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.