ಮಡಿಕೇರಿ, ಮೇ ೬: ಪಿ.ಎಸ್.ಐ. ಹುದ್ದೆ ನೇಮಕಾತಿಯಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆದಿದ್ದು, ಇದರಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಸಂಬAಧಿಕರ ಪಾತ್ರ ಇರುವುದಾಗಿ ತನಿಖೆಯಿಂದ ತಿಳಿದು ಬಂದಿದೆ. ಈ ಹಿನ್ನೆಲೆ ಅಶ್ವತ್ಥ್ ನಾರಾಯಣ್ ಅವರನ್ನು ಸಚಿವ ಸಂಪುಟದಿAದ ವಜಾಗೊಳಿಸುವಂತೆ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿ, ಭಾರತದಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದ ಭ್ರಷ್ಟಾಚಾರ ಹಿಂದೆAದೂ ನಡೆದಿರಲಿಲ್ಲ. ಬಿಜೆಪಿಯ ದುರಾಡಳಿತ ಪರಿಣಾಮ ಇಂದು ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಭ್ರಷ್ಟಾಚಾರ ನಡೆದಿದೆ. ಇದರಲ್ಲಿ ಸಚಿವ ಅಶ್ವತ್ಥ್ ನಾರಾಯಣ್ ಪಾತ್ರ ಇದ್ದು, ಸರಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ನಿಷ್ಪಕ್ಷಪಾತ ತನಿಖೆಯಾಗಬೇಕು ಎಂದು ಆಗ್ರಹಿಸಿದ ಅವರು, ಈ ಹಗರಣದಲ್ಲಿ ಮತ್ತಷ್ಟು ಬಿಜೆಪಿ ನಾಯಕರ ಕೈವಾಡವಿದೆ. ಪರೀಕ್ಷೆ ಬರೆದವರ ಭವಿಷ್ಯದ ಜೊತೆ ಚೆಲ್ಲಾಟವಾಡಿದ್ದಾರೆ ಎಂದು ಆರೋಪಿಸಿದರು.
ಎನ್.ಎಸ್.ಯು.ಇ ಅಧ್ಯಕ್ಷ ಕೊಂಬಾರನ ರೋಷನ್ ಗಣಪತಿ ಮಾತನಾಡಿ, ಅಶ್ವತ್ ಗೌಡ ಸಂಬAಧಿಕ ದರ್ಶನ್ ಗೌಡ ಅಕ್ರಮದಲ್ಲಿ ತೊಡಗಿಸಿಕೊಂಡಿರುವುದು ಬಹಿರಂಗಗೊAಡಿದೆ. ಈ ಬಗ್ಗೆ ನ್ಯಾಯಾಂಗ ತನಿಖೆಯಾಗಲಿ. ಪ್ರಾಮಾಣಿಕವಾಗಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಬೇಕು. ಕೊಡಗಿನ ಈರ್ವರು ಪಿಎಸ್ಐ ಪರೀಕ್ಷೆ ಬರೆದಿದ್ದರು. ಅವರು ಕೂಡ ಇದೀಗ ಅತಂತ್ರ ಸ್ಥಿತಿಯಲ್ಲಿದ್ದಾರೆ. ಪಾರದರ್ಶಕ ತನಿಖೆಯಾಗದಿದ್ದಲ್ಲಿ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ವಕ್ತಾರ ತೆನ್ನೀರ ಮೈನಾ, ಸಾಮಾಜಿಕ ಜಾಲತಾಣ ಘಟಕದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು, ಮಾಜಿ ಸೈನಿಕರ ಘಟಕದ ಅಧ್ಯಕ್ಷ ಬೊಳ್ಳಿಯಂಡ ಗಣೇಶ್, ವರ್ತಕ ಪ್ರಕೋಷ್ಠದ ಅಧ್ಯಕ್ಷ ಅಂಬೇಕಲ್ ನವೀನ್ ಕುಶಾಲಪ್ಪ, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ವಕ್ತಾರ ಸುರೇಶ್, ಎನ್.ಎಸ್.ಯು.ಇ ಪದಾಧಿಕಾರಿಗಳಾದ ಹ್ಯಾರಿಸ್, ವಿಖಿನ್ ಸೇರಿದಂತೆ ಇನ್ನಿತರರು ಹಾಜರಿದ್ದರು.