ಸೋಮವಾರಪೇಟೆ, ಮೇ ೬: ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಲು ಬೇಸಿಗೆ ಶಿಬಿರಗಳು ಸಹಕಾರಿಯಾಗಿವೆ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ. ಚಂದ್ರು ಹೇಳಿದರು.
ತಾಲೂಕು ಬಾಲ ಭವನ ಸಮಿತಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ರಾಜ್ಯ ಬಾಲ ಭವನ ಸೊಸೈಟಿ ಇವುಗಳ ಆಶ್ರಯದಲ್ಲಿ ಪಟ್ಟಣದ ಸ್ತಿçà ಶಕ್ತಿ ಭವನದಲ್ಲಿ ಆಯೋಜಿಸಲಾಗಿರುವ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಪಾಠದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲೂ ತಮ್ಮನ್ನು ತೊಡಗಿಸಿಕೊಳ್ಳಬೇಕು. ಸರ್ಕಾರವು ವಿದ್ಯಾರ್ಥಿಗಳಿಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದ್ದು, ಇವುಗಳನ್ನು ಸದ್ಬಳಕೆ ಮಾಡಿಕೊಂಡು ಶೈಕ್ಷಣಿಕ ಪ್ರಗತಿ ಸಾಧಿಸಬೇಕು ಎಂದರು.
ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಶಾಲಾ ಪರಿಸರವನ್ನು ಸುಸಜ್ಜಿತವನ್ನಾಗಿಸಿ, ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಹೆಚ್ಚಿಸಲು ವಿನೂತನ ಯೋಜನೆಗಳನ್ನು ಜಾರಿಗೆ ತಂದಿದೆ. ಪೋಷಕರು ತಮ್ಮ ಮಕ್ಕಳಲ್ಲಿ ಇರುವ ಪ್ರತಿಭೆಗಳನ್ನು ಗುರುತಿಸಿ ಅಗತ್ಯ ಪ್ರೋತ್ಸಾಹ ನೀಡಿದಲ್ಲಿ ಭವಿಷ್ಯದಲ್ಲಿ ಉತ್ತಮ ಸಾಧನೆ ತೋರುತ್ತಾರೆ ಎಂದು ಅಭಿಪ್ರಾಯಿಸಿದರು.
ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಣ್ಣಯ್ಯ, ಮಹಿಳಾ ಮೇಲ್ವಿಚಾರಕಿ ಗುರುಬಸಮ್ಮ ಹಾಗೂ ಸಾವಿತ್ರಿ ಅವರುಗಳು ಉಪಸ್ಥಿತರಿದ್ದರು.