ಸೋಮವಾರಪೇಟೆ, ಮೇ ೮: ತಾಲೂಕು ಆಡಳಿತ ಮತ್ತು ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಇಲ್ಲಿನ ಅಟಲ್‌ಜೀ ಕನ್ನಡ ಭವನದಲ್ಲಿ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಪಟ್ಟಣದ ಶ್ರಮಿಕ ವರ್ಗದ ಪಳನಿಸ್ವಾಮಿ ಹಾಗೂ ಶಿವಣ್ಣ ಅವರುಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮುದ್ದಿನಕಟ್ಟೆ ಮಠಾಧೀಶರಾದ ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ತಾಲೂಕು ತಹಶೀಲ್ದಾರ್ ಗೋವಿಂದರಾಜು, ಪ.ಪಂ. ಅಧ್ಯಕ್ಷ ಪಿ.ಕೆ. ಚಂದ್ರು, ಸಮಿತಿಯ ಉಪಾಧ್ಯಕ್ಷ ಅಭಿಮನ್ಯುಕುಮಾರ್, ವೀರಶೈವ ಸಮಾಜದ ಅಧ್ಯಕ್ಷ ಶಿವಕುಮಾರ್, ಪೊಲೀಸ್ ಇನ್ಸ್ಪೆಕ್ಟರ್ ಮಹೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.