ಸೋಮವಾರಪೇಟೆ, ಮೇ ೮: ತಾಲೂಕಿನ ೮ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ೧೯.೯೭ ಕೋಟಿ ವೆಚ್ಚದಲ್ಲಿ ವಿವಿಧ ಯೋಜನೆಗಳಡಿ ಕೈಗೊಳ್ಳಲು ಉದ್ದೇಶಿಸಿರುವ ರಸ್ತೆ ಕಾಮಗಾರಿಗಳಿಗೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರು ಚಾಲನೆ ಸೋಮವಾರಪೇಟೆ, ಮೇ ೮: ತಾಲೂಕಿನ ೮ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ೧೯.೯೭ ಕೋಟಿ ವೆಚ್ಚದಲ್ಲಿ ವಿವಿಧ ಯೋಜನೆಗಳಡಿ ಕೈಗೊಳ್ಳಲು ಉದ್ದೇಶಿಸಿರುವ ರಸ್ತೆ ಕಾಮಗಾರಿಗಳಿಗೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರು ಚಾಲನೆ ವಿಭಾಗ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಕಾವೇರಿ ನೀರಾವರಿ ನಿಗಮದ ಹೇಮಾವತಿ ಪುನರ್ವಸತಿ ಯೋಜನೆಯಡಿ ಕೈಗೊಳ್ಳಲು
(ಮೊದಲ ಪುಟದಿಂದ) ಉದ್ದೇಶಿಸಲಾಗಿರುವ ೧೯. ೯೭ ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಾಸಕರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಹೇಮಾವತಿ ಪುನರ್ವಸತಿ ಯೋಜನೆಯಡಿ ೮೫ ಲಕ್ಷ ವೆಚ್ಚದಲ್ಲಿ ಕೈಗೊಳ್ಳಲು ಉದ್ದೇಶಿಸಲಾಗಿರುವ ಕೊಡ್ಲಿಪೇಟೆ ಗ್ರಾ.ಪಂ. ವ್ಯಾಪ್ತಿಯ ಕಸೂರು-ಹೊಸಳ್ಳಿ ಗ್ರಾಮ ಸಂಪರ್ಕದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅಪ್ಪಚ್ಚುರಂಜನ್, ಕೊರೊನಾ ಮಾಹಾಮಾರಿಯಿಂದ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದರೂ ಅಭಿವೃದ್ಧಿ ಕಾರ್ಯ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರ್ಕಾರಗಳು ಹಿಂದೇಟು ಹಾಕುತ್ತಿಲ್ಲ ಎಂದರು.
ಕೊಡ್ಲಿಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕೊಡ್ಲಿಪೇಟೆ-ಶಾಂತಪುರ ರಸ್ತೆ ಅಭಿವೃದ್ಧಿಗೆ ೯೯ ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಟೆಂಡರ್ ಹಂತದಲ್ಲಿದೆ. ನೀರಾವರಿ ಯೋಜನೆ ಮೂಲಕ ಕೆಸೂರು ಗ್ರಾಮಕ್ಕೆ ೮೦ ಲಕ್ಷ ನೀಡಲಾಗಿದೆ. ಇದರೊಂದಿಗೆ ಗ್ರಾಮ ಪಂಚಾಯಿತಿಗಳಿಗೆ ತಲಾ ೪೦ ಲಕ್ಷ ಅನುದಾನ ಒದಗಿಸಲಾಗಿದೆ ಎಂದು ರಂಜನ್ ಹೇಳಿದರು.
ಕೊರೊನಾ ಸಂಕಷ್ಟದ ನಡುವೆಯೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಡಗಿನ ಈರ್ವರು ಶಾಸಕರ ಮನವಿಗೆ ಸ್ಪಂದಿಸಿ ೧೦೦ ಕೋಟಿ ಅನುದಾನ ನೀಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ನಾಲ್ಕೆöÊದು ಜಿಲ್ಲೆಗಳಿಗೆ ನೀರು ಒದಗಿಸುತ್ತಿದ್ದೇವೆ. ಆದರೆ ಕೊಡಗಿಗೆ ಅನುದಾನ ಕಡಿಮೆ ನೀಡುತ್ತಿರುವ ಬಗ್ಗೆ ತಾನು ಹಾಗೂ ಕೆ.ಜಿ. ಬೋಪಯ್ಯ ವಿಧಾನ ಸಭೆಯಲ್ಲಿ ಪ್ರಸ್ತಾಪಿಸಿದ ಹಿನ್ನೆಲೆ ಹೆಚ್ಚು ಅನುದಾನ ಬಿಡುಗಡೆಗೊಂಡಿದ್ದು, ಜಿಲ್ಲೆಯಾದ್ಯಂತ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ ಎಂದರು.
ಗ್ರಾಮಕ್ಕೆ ರಸ್ತೆ ನಿರ್ಮಿಸುವ ಸಂದರ್ಭ ಸ್ಥಳೀಯರು ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಬೇಕು. ಕಾಮಗಾರಿಯ ಪ್ರಗತಿಯ ಬಗ್ಗೆ ಗಮನಹರಿಸಬೇಕು. ರಸ್ತೆಗಳು ದೀರ್ಘಕಾಲ ಬಾಳಿಕೆ ಬರಬೇಕಾದರೆ ಚರಂಡಿ ಅಗತ್ಯವಾಗಿದ್ದು, ಇದಕ್ಕೆ ಬೇಕಾದ ಸ್ಥಳವನ್ನು ಗ್ರಾಮಸ್ಥರೇ ಬಿಟ್ಟುಕೊಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭ ಉಪಸ್ಥಿತರಿದ್ದ ಕಿರಿಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ಮಾತನಾಡಿ, ಕೊಡ್ಲಿಪೇಟೆ ಮತ್ತು ಬೆಸೂರು ಗ್ರಾಮ ಪಂಚಾಯಿತಿಗಳಲ್ಲಿ ೬ ರಿಂದ ೭ ಕೋಟಿಯ ಕಾಮಗಾರಿಗಳು ನಡೆಯುತ್ತಿದ್ದು, ಗ್ರಾಮೀಣ ಪ್ರದೇಶದಲ್ಲಿ ನಡೆಯುವ ಕಾಮಗಾರಿಗಳು ದೀರ್ಘ ಬಾಳಿಕೆ ಬರಬೇಕಾದರೆ ಅಭಿಯಂತರರು ಆಗಾಗ್ಗೆ ಕಾಮಗಾರಿ ಪರಿಶೀಲನೆ ನಡೆಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭ ಕೊಡ್ಲಿಪೇಟೆ ಗ್ರಾ.ಪಂ. ಅಧ್ಯಕ್ಷ ಶೋಭಿತ್, ಗ್ರಾಮದ ಪ್ರಮುಖರಾದ ಸುಬ್ರಮಣಿ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.
ಶನಿವಾರಸಂತೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಜಲಜೀವನ್ ಮಿಷನ್ ಯೋಜನೆಯಡಿ ಒಟ್ಟು ೨೬೬ ಲಕ್ಷ, ದುಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ೨೩೨, ಬ್ಯಾಡಗೊಟ್ಟ ಗ್ರಾ.ಪಂ. ವ್ಯಾಪ್ತಿಯಲ್ಲಿ ೧೭೦, ಕೊಡ್ಲಿಪೇಟೆ ಗ್ರಾ.ಪಂ. ವ್ಯಾಪ್ತಿಯಲ್ಲಿ ೫೨೫, ಬೆಸೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ೩೧೧, ಹಂಡ್ಲಿ ಗ್ರಾ.ಪಂ.ನಲ್ಲಿ ೨೨೭, ನಿಡ್ತ ಗ್ರಾ.ಪಂ. ವ್ಯಾಪ್ತಿಯಲ್ಲಿ ೧೫೪, ಆಲೂರು ಸಿದ್ದಾಪುರ ಗ್ರಾ.ಪಂ. ವ್ಯಾಪ್ತಿಯಲ್ಲಿ ೧೦೮ ಲಕ್ಷ ವೆಚ್ಚದ ರಸ್ತೆ ಹಾಗೂ ಕುಡಿಯುವ ನೀರು ಯೋಜನೆಗೆ ಚಾಲನೆ ನೀಡಲಾಯಿತು. ಈ ಸಂದರ್ಭ ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳು, ಸದಸ್ಯರು, ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು, ಜಿ.ಪಂ. ಇಂಜಿನಿಯರಿAಗ್ ವಿಭಾಗದ ಅಭಿಯಂತರ ವೀರೇಂದ್ರ, ಅಭಿಯಂತರ ಸಲೀಂ, ಹೇಮಾವತಿ ಪುನರ್ವಸತಿ ಯೋಜನೆಯ ಅಭಿಯಂತರ ಸಚಿತ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಜಯಣ್ಣ, ಪಕ್ಷದ ಪ್ರಮುಖರಾದ ಸವಿತಾ ಸತೀಶ್, ರಘು, ನಿತಿನ್, ರಕ್ಷಿತ್, ಪ್ರಸಾದ್ ಪಟೇಲ್, ಬಾಬು ರಾಜೇಂದ್ರ ಪ್ರಸಾದ್, ನಾಗರಾಜು, ನೇತ್ರಾವತಿ, ಕುಶಾಲಪ್ಪ, ಕ್ಯಾತೆ ಶಿವು, ಮುಳ್ಳೂರು ಮೋಹನ್ರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.