ಮಡಿಕೇರಿ, ಮೇ ೭: ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಎಂಬಿಬಿಎಸ್ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭವು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜು ಆವರಣದಲ್ಲಿ ನಡೆಯಿತು.
ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರು ೧೯೯೪ರಲ್ಲಿ ಪ್ರಥಮ ಬಾರಿಗೆ ಎಂಎಲ್‌ಎ ಆದ ಸಂದರ್ಭ ಶಿಕ್ಷಣ, ಆರೋಗ್ಯ, ಮೂಲಭೂತ ಸೌಲಭ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಹೇಳಿದ್ದೆ, ಅದರಂತೆ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಮಡಿಕೇರಿಯಲ್ಲಿ ನಿರ್ಮಾಣವಾಗಲು ಶ್ರಮಿಸಿದ್ದೇನೆ. ಜೊತೆಗೆ ಕುಶಾಲನಗರದಲ್ಲಿ ಎಂಜಿನಿಯರಿAಗ್ ಕಾಲೇಜು, ಚಿಕ್ಕಳುವಾರದಲ್ಲಿ ಸ್ನಾತಕೋತ್ತರ ಪದವಿ ಕೇಂದ್ರ, ಪ್ರಸ್ತುತ ಬಜೆಟ್‌ನಲ್ಲಿ ಸರ್ಕಾರ ಪ್ರತ್ಯೇಕ ವಿಶ್ವವಿದ್ಯಾನಿಲಯ ಸ್ಥಾಪನೆಗೆ ಮುಂದಾಗಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿಯಾಗಿದ್ದ ಡಾ. ಎನ್.ವಿ. ಪ್ರಸಾದ್ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಡಾ. ಎನ್. ಶಿವಶಂಕರ ಅವರನ್ನು ಈ ಸಂದರ್ಭದಲ್ಲಿ ಸ್ಮರಿಸಲೇಬೇಕು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಜಾಗ ಕಾಯ್ದಿರಿಸಿದರು, ಆ ಸಂದರ್ಭ ಸರ್ಕಾರ ೧೬೦ ಕೋಟಿ ರೂ. ಮಂಜೂರು ಮಾಡಿತ್ತು, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ೪೦೦ ಹಾಸಿಗೆ ಆಸ್ಪತ್ರೆ ನಿರ್ಮಾಣ ಆಗುತ್ತಿದೆ. ಇದಕ್ಕಾಗಿ ಸರ್ಕಾರ ೧೦೦ ಕೋಟಿ ರೂ.ಬಿಡುಗಡೆ ಮಾಡಿದೆ ಎಂದು ಎಂ.ಪಿ. ಅಪ್ಪಚ್ಪುರಂಜನ್ ನುಡಿದರು.
ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ಎಂಬಿಬಿಎಸ್ ಪದವಿ ಪೂರ್ಣಗೊಳಿಸಿ ಮೊದಲ ಬ್ಯಾಚ್ ತೇರ್ಗಡೆಯಾಗಿ ವೈದ್ಯಕೀಯ ವೃತ್ತಿ ಜೀವನಕ್ಕೆ ಕಾಲಿರಿಸುತ್ತಿರುವುದು ಸಂತಸದ ವಿಷಯ ಎಂದರು.
ವಿಶ್ವವ್ಯಾಪಿ ಕೋವಿಡ್ ಶುರುವಾದಾಗ, ಅದರಲ್ಲೂ ಎರಡನೇ ಅಲೆ ಸಂದರ್ಭದಲ್ಲಿ ನಿಮ್ಮ ವೈದ್ಯಕೀಯ ಸೇವೆಯನ್ನು ಕೊಡಗಿನ ಜನತೆ ಮರೆತಿಲ್ಲ ಎಂದು ಕೆ.ಜಿ. ಬೋಪಯ್ಯ ಹೇಳಿದರು.
ಕೊಡಗು ಜಿಲ್ಲೆಯಲ್ಲಿ ವೈದ್ಯಕೀಯ ಪದವಿ ಪಡೆದು ವೈದ್ಯಕೀಯ ವೃತ್ತಿ ಜೀವನ ಆರಂಭಿಸುತ್ತಿರುವ ವೈದ್ಯರು ಜನ ಸಾಮಾನ್ಯರಿಗೆ ಸ್ಪಂದಿಸಬೇಕು. ವೃತ್ತಿಯ ಘನತೆ ಮರೆಯಬಾರದು ಕೆ.ಜಿ. ಬೋಪಯ್ಯ ಕಿವಿಮಾತು ಹೇಳಿದರು.
ಕಾಲೇಜು ಆರಂಭ ಸಂದರ್ಭದಲ್ಲಿ ನಿರ್ದೇಶಕರಾಗಿದ್ದ ಮಹೇಂದ್ರ ಅವರ ಪಾತ್ರ ದೊಡ್ಡದು. ಇಲ್ಲಿನ ವೈದ್ಯಕೀಯ ಪದವಿ ಪಡೆದ ವಿದ್ಯಾರ್ಥಿಗಳು ಜನಪ್ರಿಯ ವೈದ್ಯರಾಗಿ ಹೆಸರು ಗಳಿಸಬೇಕು ಎಂದು ಹೇಳಿದರು.
ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿವಿಯ ನಿರ್ದೇಶಕರಾದ ಡಾ.ಮಹೇಂದ್ರ ಅವರು ಮಾತನಾಡಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಆರಂಭದಲ್ಲಿ ಹಲವು ಎಡರು ತೊಡರುಗಳ ನಡುವೆ ಈ ಹಂತಕ್ಕೆ ಬರಲಾಗಿದೆ. ಜಾಗ ಗುರುತಿಸುವುದು ಮತ್ತು ಕಾಲೇಜಿನ ಅಭಿವೃದ್ಧಿಗೆ ಇಲ್ಲಿನ ಶಾಸಕದ್ವಯರು ತುಂಬಾ ಶ್ರಮಿಸಿದ್ದಾರೆ ಎಂದರು.
ಬೆಂಗಳೂರಿನ ಫೊರ್ಟಿಸ್ ಆಸ್ಪತ್ರೆಯ ಹೃದಯ ವಿಭಾಗದ ಮುಖ್ಯಸ್ಥ ಡಾ. ವಿವೇಕ್ ಜವಳಿ ಮಾತನಾಡಿ, ವೈದ್ಯಕೀಯ ಕ್ಷೇತ್ರವು ತನ್ನದೇ ಆದ ಮಹತ್ವ ಹೊಂದಿದ್ದು, ಶ್ರದ್ಧೆಯಿಂದ ತೊಡಗಿಸಿಕೊಳ್ಳಬೇಕು. ಒಳ್ಳೆಯ ಹೆಸರು ಪಡೆಯಲು ಮುಂದಾಗಬೇಕು ಎಂದು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ಕಾರ್ಯಪ್ಪ, ಪ್ರಾಂಶುಪಾಲ ಡಾ. ವಿಶಾಲ್ ಕುಮಾರ್, ಡಾ. ಮಂಜುನಾಥ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಡಾ. ಜಯಲಕ್ಷಿö್ಮÃ ಪಾಟ್ಕರ್, ಎಂ.ಎ. ನಿರಂಜನ ಇತರರು ಇದ್ದರು.