ಮಡಿಕೇರಿ, ಮೇ ೮: ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ ೨೦೨೧-೨೨ನೇ ಸಾಲಿಗೆ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾAಶ(ಎಸ್‌ಎಸ್‌ಪಿ)ದಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಎಸ್‌ಎಸ್‌ಪಿ ಯಲ್ಲಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯಲು ಎಸ್‌ಎಸ್‌ಪಿ ಪೋರ್ಟಲ್ hಣಣಠಿs://ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ಅಡಿಯಲ್ಲಿ ಅರ್ಜಿ ಸಲ್ಲಿಸುವುದು (ರಿನಿವಲ್ ಮತ್ತು ಪ್ರೆಸ್) ಕಡ್ಡಾಯವಾಗಿದ್ದು, ಅರ್ಜಿ ಸಲ್ಲಿಸಲು ತಾ. ೧೩ ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದಲ್ಲಿ (ಎಸ್‌ಎಸ್‌ಪಿ) ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್‌ಸೈಟ್ hಣಣಠಿs://ಜom.ಞಚಿಡಿಟಿಚಿಣಚಿಞಚಿ.gov.iಟಿ/ಞoಜಚಿgu/ಠಿubಟiಛಿ ಅಥವಾ ಸಹಾಯವಾಣಿ ಸಂಖ್ಯೆ ೮೨೭೭೭೯೯೯೯೦ಗೆ ಅಥವಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್‌ಎಂಸಿ ಕಾಲೇಜು ಹತ್ತಿರ, ಮಡಿಕೇರಿ ಇವರನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ ೦೮೨೭೨-೨೨೫೫೨೮, ಮಾಹಿತಿ ಕೇಂದ್ರ, ಮಡಿಕೇರಿ ೦೮೨೭೨-೨೨೦೨೧೪, ಮಾಹಿತಿ ಕೇಂದ್ರ ಸೋಮವಾರಪೇಟೆ ೮೫೪೮೦೬೮೫೧೯ ಮತ್ತು ಮಾಹಿತಿ ಕೇಂದ್ರ ಪೊನ್ನಂಪೇಟೆ ದೂ. ೯೯೦೦೭೩೧೦೩೭ ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಮತ ತಿಳಿಸಿದ್ದಾರೆ.