ಮಡಿಕೇರಿ, ಮೇ ೭: ರಾಷ್ಟಿçÃಯ ಪ್ರಾಣಿ ಹುಲಿಯ ಉಗುರುಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಸಿ.ಐ.ಡಿ ಅರಣ್ಯ ಘಟಕದ ಪೊಲೀಸರು ಯಶಸ್ವಿಯಾಗಿದ್ದಾರೆ. ಮಡಿಕೇರಿಯ ಚೈನ್‌ಗೇಟ್ ಬಳಿಯ ಬಸ್ ನಿಲ್ದಾಣದ ಎಡ ಬದಿಯಲ್ಲಿ ಗುಂಡ್ಲುಪೇಟೆ ನಿವಾಸಿಗಳಾದ ಕುಮಾರ ಹಾಗೂ ವಿನು ಎಂಬವರು ಹುಲಿಯ ೪ ಉಗುರುಗಳನ್ನು ವಶದಲ್ಲಿಟ್ಟುಕೊಂಡು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಗ ಪೊಲೀಸರು ಉಗುರು ಸಮೇತ ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನದಲ್ಲಿರಿಸಿದ್ದಾರೆ.
ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ ಶರತ್‌ಚಂದ್ರ ಅವರ ನಿರ್ದೇಶನದ ಮೇರೆಗೆ ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಪ್ರಭಾರ ಪೊಲೀಸ್ ಅಧೀಕ್ಷಕ ಶ್ರೀನಿವಾಸ್ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿ.ಎಸ್.ಐ ಸಿ.ಯು ಸವಿ, ಹೆಡ್‌ಕಾನ್ಸೆ÷್ಟಬಲ್‌ಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ ಹಾಗೂ ಕಾನ್ಸೆ÷್ಟಬಲ್‌ಗಳಾದ ಸ್ವಾಮಿ ಮತ್ತು ಮಂಜುನಾಥ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.