ನಾಪೋಕ್ಲು, ಮೇ ೮: ಇಲ್ಲಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕ್ರೀಡಾ ಅಕಾಡೆಮಿ ವತಿಯಿಂದ ೨೨ನೇ ವರ್ಷ ಬೇಸಿಗೆ ಶಿಬಿರದಲ್ಲಿ ಅಂತರರಾಷ್ಟಿçÃಯ ಮಾಜಿ ಹಾಕಿ ಗೋಲ್‌ಕೀಪರ್ ಬಾಳೆಯಡ ಪೂಣಚ್ಚ ಶನಿವಾರ ಶಿಬಿರದಲ್ಲಿ ಪಾಲ್ಗೊಂಡು ಮಕ್ಕಳಿಗೆ ಮಾರ್ಗದರ್ಶನ ನೀಡಿದರು.

ನಂತರ ಮಾತನಾಡಿದ ಅವರು, ತರಬೇತಿ ಶಿಬಿರಕ್ಕೆ ಮಾತ್ರ ಸೀಮಿತ ಆಗಬಾರದು. ಶಿಬಿರದಲ್ಲಿ ಪಾಲ್ಗೊಂಡವರು ಶಿಬಿರ ಮುಕ್ತಾಯಗೊಂಡ ಬಳಿಕವೂ ಪ್ರತಿದಿನ ಅಭ್ಯಾಸ ಮಾಡಬೇಕು. ಪೋಷಕರ ಬಲವಂತಕ್ಕೆ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದೆ ಸ್ವಂತ ಆಸಕ್ತಿಯಿಂದ ಪಾಲ್ಗೊಳ್ಳಬೇಕು. ಕ್ರೀಡೆಗೆ ದೇಶದಲ್ಲಿ ವಿಫುಲ ಅವಕಾಶಗಳಿವೆ. ಕೌಟುಂಬಿಕ ಹಾಕಿ ಉತ್ಸವವನ್ನು ಕ್ರೀಡಾ ತರಬೇತಿಗೆ ಅಡಿಪಾಯವನ್ನಾಗಿ ಮಾಡಿಕೊಂಡು ಮುಂದುವರಿಯಬೇಕು ಎಂದರು.

ಕ್ರೀಡಾ ಅಕಾಡೆಮಿ ಅಧ್ಯಕ್ಷ ಕಲಿಯಂಡ ಅಯ್ಯಣ್ಣ, ಉಪಾಧ್ಯಕ್ಷ ಬೊಪ್ಪಂಡ ಡಾ. ಜಾಲಿ ಬೋಪಯ್ಯ ಮಾತನಾಡಿ, ಈ ವರ್ಷದ ಶಿಬಿರದಲ್ಲಿ ೬೬ ವಿದ್ಯಾರ್ಥಿಗಳು ಪಾಲ್ಗೊಂಡಿದ್ದು ತರಬೇತುದಾರರಾಗಿ ಕೇಟೋಳಿರ ಡಾಲಿ ಅಚ್ಚಪ್ಪ ಮತ್ತು ಅರೆಯಡ ಗಣೇಶ್ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.