ಮಡಿಕೇರಿ, ಮೇ ೮: ಹಾಕಿ ಇಂಡಿಯಾ ವತಿಯಿಂದ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆಯುತ್ತಿರುವ ಸೀನಿಯರ್ ನ್ಯಾಷನಲ್ ಹಾಕಿ ಪಂದ್ಯಾವಳಿಯಲ್ಲಿ ಹಾಕಿ ಕರ್ನಾಟಕ ಮಹಿಳಾ ತಂಡ ಎರಡನೇ ಪಂದ್ಯದಲ್ಲಿ ತಮಿಳುನಾಡು ವಿರುದ್ಧ ೩-೦ ಗೋಲುಗಳ ಅಂತರದಲ್ಲಿ ಜಯ ಸಾಧಿಸಿದೆ.