ವೀರಾಜಪೇಟೆ, ಮೇ ೮: ಪ್ರಥಮ ಪಿ.ಯು. ಪರೀಕ್ಷೆ ಅನುತ್ತೀರ್ಣಗೊಂಡಿರುವ ವಿದ್ಯಾರ್ಥಿಗಳಿಗೆ ಮುಂಬರುವ ಪೂರಕ ಪರೀಕ್ಷೆಯನ್ನು ಎದುರಿಸುವ ಕುರಿತು ಪಟ್ಟಣದ ಚಾಣಕ್ಯ ಎಜುಕೇಷನ್ ಟ್ರಸ್ಟ್ನ ವತಿಯಿಂದ ತಾ. ೧೧ ರಂದು ಉಚಿತ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಚಾಣಕ್ಯ ಎಜುಕೇಷನ್ ಟ್ರಸ್ಟ್ನ ಅಧ್ಯಕ್ಷೆ ಕವಿತಾ ತಿಳಿಸಿದ್ದಾರೆ.
ಪತ್ರಿಕಾ ಹೇಳಿಕೆಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಅವರು, ವೀರಾಜಪೇಟೆಯ ತೆಲುಗರ ಬೀದಿಯಲ್ಲಿನ ಕರ್ನಾಟಕ ಬ್ಯಾಂಕ್‌ನ ಕಟ್ಟಡದಲ್ಲಿನ ಚಾಣಕ್ಯ ಕೋಚಿಂಗ್ ಸೆಂಟರ್‌ನಲ್ಲಿ ತಾ. ೧೧ ರಂದು ಬೆಳಿಗ್ಗೆ ೧೦ ರಿಂದ ೧೨ ರವರೆಗೆ ಕಾರ್ಯಾಗಾರ ನಡೆಯಲಿದೆ. ಮುಂಬರುವ ಪೂರಕ ಪರೀಕ್ಷೆಯನ್ನು ಎದುರಿಸುವ ಹಾಗೂ ಆತ್ಮವಿಶ್ವಾಸವನ್ನು ತುಂಬುವ ಸಲುವಾಗಿ ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಸಂಪನ್ಮೂಲ ವ್ಯಕ್ತಿಗಳು ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ. ೮೨೭೭೪೯೬೦೦೭ ಅನ್ನು ಸಂಪರ್ಕಿಸುವAತೆ ಕೋರಿದ್ದಾರೆ.