ಮಡಿಕೇರಿ, ಮೇ ೮: ಜಿಲ್ಲಾ ಸಹಕಾರ ಭಾರತಿ ಸದಸ್ಯತ್ವ ಆಂದೋಲನ ತಾ. ೯ ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಗೆ ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮಕ್ಕೆ ಸಹಕಾರ ಭಾರತೀಯ ರಾಷ್ಟಿçÃಯ ಸಂರಕ್ಷಕರಾದ ರಮೇಶ್ ವ್ಯೆದ್ಯ, ರಾಜ್ಯ ಅಧ್ಯಕ್ಷ ರಾಜಶೇಖರ್ ಶೀಲಾವಂತ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮೋಹನ್ದಾಸ್ ನಾಯಕ್, ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಮಂಜುನಾಥ್, ರಾಜ್ಯ ಕಾರ್ಯದರ್ಶಿಗಳಾದ ಕೃಷ್ಣ ಪ್ರಸಾದ್, ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಮನು ಮುತ್ತಪ್ಪ, ಜಿಲ್ಲಾ ಕೇಂದ್ರ ಬ್ಯಾಂಕಿನ ಮಾಜಿ ಅಧ್ಯಕ್ಷ ಬಿ.ಡಿ. ಮಂಜುನಾಥ್, ಸಹಕಾರ ಭಾರತಿ ರಾಜ್ಯ ಉಪಾಧ್ಯಕ್ಷ ರವಿ ಬಸಪ್ಪ, ಮಹಿಳಾ ಘಟಕದ ಸಂಘಟನಾ ಕಾರ್ಯದರ್ಶಿ ಬೀನಾ ಬೊಳ್ಳಮ್ಮ, ಸಹಕಾರ ಭಾರತಿ ಕೊಡಗು ಜಿಲ್ಲಾ ಅಧ್ಯಕ್ಷ ನಾಪಂಡ ಉಮೇಶ್ ಉತ್ತಪ್ಪ, ಕನ್ನಂಡ ಸಂಪತ್, ಕಾಳನ ರವಿ ಭಾಗವಹಿಸಲಿದ್ದಾರೆ.