ಸೋಮವಾರಪೇಟೆ, ಮೇ ೮: ತಾಲೂಕಿನ ಮಾದಾಪುರದ ಇಂಡಿಯನ್ ಕ್ರಿಕೆರ್ಸ್ ವತಿಯಿಂದ ಪ್ರಥಮ ವರ್ಷದ ಹಿಂದೂ ಕಪ್ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದೆ ಎಂದು ಆಯೋಜಕರಾದ ಸುನಿಲ್ ತಿಳಿಸಿದ್ದಾರೆ.
ಪಂದ್ಯಾಟದಲ್ಲಿ ಜಿಲ್ಲೆಯ ಆಟಗಾರರು ಮಾತ್ರ ಭಾಗವಹಿಸಬಹುದಾಗಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಂದ್ಯಾಟ ನಡೆಯಲಿದ್ದು, ಹಿಂದೂ ಬಾಂಧವರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಆಸಕ್ತ ತಂಡಗಳು ತಾ. ೯ ರೊಳಗೆ (ಇಂದು) ತಮ್ಮ ತಂಡದ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಆಟಗಾರರು ಕಡ್ಡಾಯವಾಗಿ ಆಧಾರ್ ಕಾರ್ಡ್ ಹಾಜರುಪಡಿಸಬೇಕು. ತಾ. ೧೩ ರಿಂದ ೧೫ರವರೆಗೆ ಮಾದಾಪುರದ ಜಿ.ಎಂ.ಪಿ. ಶಾಲಾ ಮೈದಾನದಲ್ಲಿ ಪಂದ್ಯಾಟ ನಡೆಯಲಿದೆ ಎಂದು ತಿಳಿಸಿದ್ದಾರೆ.
ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆಯುವ ತಂಡಕ್ಕೆ ೨೦ ಸಾವಿರ ನಗದು ಹಾಗೂ ಟ್ರೋಫಿ, ದ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ ೧೦ ಸಾವಿರ ನಗದು ಹಾಗೂ ಟ್ರೋಪಿ, ಇದರೊಂದಿಗೆ ವೈಯುಕ್ತಿಯ ವಿಭಾಗದಲ್ಲೂ ಪ್ರಶಸ್ತಿಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ೯೭೪೧೯೫೪೧೨೬, ೯೬೧೧೧೧೨೨೬೮ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಸುನಿಲ್ ಮಾಹಿತಿ ನೀಡಿದ್ದಾರೆ.